Assault Case: ಕನ್ನಡದಲ್ಲಿ ಮಾತಾಡಿ ಎಂದಿದ್ದಕ್ಕೆ ಹಲ್ಲೆ ಪ್ರಕರಣ; ನಿರ್ವಾಹಕನ ಮೇಲೆಯೇ ಪೋಕ್ಸೊ ಕೇಸ್!
Assault Case: ಬಸ್‌ನಲ್ಲಿ ಕೆಟ್ಟ ದೃಷ್ಟಿಯಿಂದ ನೋಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನ ಮೇರೆಗೆ ನಿರ್ವಾಹಕನ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ದಿಕ್ಕು ತಪ್ಪಿಸಲು ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ನಿರ್ವಾಹಕ ಬೇಸರ ವ್ಯಕ್ತಪಡಿಸಿದ್ದಾರೆ.


ಬೆಳಗಾವಿ: ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಕನ್ನಡ ಮಾತನಾಡಿ ಎಂದಿದ್ದಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಕಂಡಕ್ಟರ್ ಮಹಾದೇವ್ ಹುಕ್ಕೇರಿ ಆರೋಪಿಸಿದ್ದರು. ಆದರೆ ಇದೀಗ ನಿರ್ವಾಹಕನ ಮೇಲೆಯೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಸ್‌ನಲ್ಲಿ ಕೆಟ್ಟ ದೃಷ್ಟಿಯಿಂದ ನೋಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನ ಮೇರೆಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆದರೆ ಪ್ರಕರಣದ ದಿಕ್ಕು ತಪ್ಪಿಸಲು ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ನಿರ್ವಾಹಕ ಬೇಸರ ವ್ಯಕ್ತಪಡಿಸಿದ್ದಾರೆ.
ಹಲ್ಲೆ ಸಂಬಂಧ ಕಂಡಕ್ಟರ್ ಮಹಾದೇವ್ ನೀಡಿದ ದೂರು ಆಧರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗುತ್ತಿದ್ದಂತೆ ಶನಿವಾರ ಬಾಲಕಿಯಿಂದ ದೂರು ದಾಖಲಾಗಿದೆ. ಪೋಕ್ಸೊ ಪ್ರಕರಣದ ಬಗ್ಗೆ ಶುಕ್ರವಾರ ಬೆಳಗ್ಗೆಯಿಂದ ರಾತ್ರಿಯವರೆಗೂ ಎಲ್ಲೂ ಪ್ರಸ್ತಾಪವೇ ಆಗಿಲ್ಲ. ಆದರೆ ನಿರ್ವಾಹಕ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ರಾತ್ರೋರಾತ್ರಿ ಪೋಕ್ಸೊ ಪ್ರಕರಣ ದಾಖಲಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ತುಂಬಿದ ಬಸ್‌ನಲ್ಲಿ ಬಾಲಕಿಯನ್ನು ಕೆಟ್ಟ ದೃಷ್ಟಿಯಿಂದ ನೋಡಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಎದ್ದಿದೆ.
ಪೋಕ್ಸೊ ಪ್ರಕರಣ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ವಾಹಕ ಮಹಾದೇವ್ ಅವರು, ನನಗೆ ದೂರು ನೀಡಿದ ಹುಡುಗಿಯಷ್ಟು ಪ್ರಾಯದ ಮಗಳಿದ್ದಾಳೆ. ಪ್ರಕರಣದ ದಿಕ್ಕು ತಪ್ಪಿಸಲು ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಏನಿದು ಪ್ರಕರಣ?
ಬೆಳಗಾವಿ ತಾಲೂಕಿನ ಸೂಳೆಬಾವಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ನಿರ್ವಾಹಕ ಮಹಾದೇವ್ ಮೇಲೆ ಹಲ್ಲೆ ನಡೆದಿತ್ತು. ಸಾರಿಗೆ ಬಸ್‌ನಲ್ಲಿ ಮರಾಠಿಯಲ್ಲಿ ಮಾತನಾಡಬೇಕು ಎಂದು ಮರಾಠಿ ಭಾಷಿಕರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿದ್ದರು. ಒಬ್ಬ ಹುಡುಗಿ ಹಾಗೂ ಹುಡುಗ ಸಾರಿಗೆ ಬಸ್‌ನಲ್ಲಿ ಇದ್ದರು. ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣ ಇದೆ. ಆದರೆ ಆ ಹುಡುಗಿ ಹುಡಗನ ಟಿಕೆಟ್ ಉಚಿತವಾಗಿ ಕೊಡಬೇಕು ಎಂದು ದಬ್ಬಾಳಿಕೆ ಮಾಡಿದ್ದಳು. ಈ ವೇಳೆ ಮರಾಠಿಯಲ್ಲಿ ಮಾತಾಡು, ಮರಾಠಿ ಕಲಿತುಕೊಳ್ಳಬೇಕು ಎಂದು ಮರಾಠಿಯಲ್ಲೇ ಬೈದಿದ್ದಳು. ನಂತರ ನಿನಗೆ ಮರಾಠಿ ಭಾಷೆ ಬರುವುದಿಲ್ಲ ಎಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಿರ್ವಾಹಕ ಮಹಾದೇವ ತಿಳಿಸಿದ್ದರು.
ಈ ಸುದ್ದಿಯನ್ನೂ ಓದಿ | Heart Failure: ಎದೆನೋವಿನಿಂದ ಕುಸಿದು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು
ಸಾರಿಗೆ ಬಸ್‌ನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಮನಸೋ ಇಚ್ಛೆ ಥಳಿಸಿದ್ದಾರೆ ಎಂದು ಕಂಡಕ್ಟರ್ ಕಣ್ಣೀರು ಹಾಕಿದ್ದರು. ನೀನು ಮರಾಠಿ ಮಾತನಾಡಬೇಕು. ಕನ್ನಡ ಮಾತನಾಡಿದರೆ ತಿಳಿಯುವುದಿಲ್ಲ ಎಂದು ಸಣ್ಣಪಂತಬಾಳೆಂದ್ರಿ ಬರುವ ಹೊತ್ತಿಗೆ ನೂರಾರು ಯುವಕರ ಗುಂಪು ನನ್ನ ಮೇಲೆ ಹಲ್ಲೆ ಮಾಡಿದೆ ಎಂದು ಕಂಡಕ್ಟರ್ ಆರೋಪಿಸಿದ್ದರು.