ಬೆಳಗಾವಿ: ವೈದ್ಯಕೀಯ, ದಂತ ವೈದ್ಯಕೀಯ, ಫಾರ್ಮಸಿ, ಆಯುರ್ವೇದ, ಫಿಜಿಯೋಥೆರಪಿ, ನರ್ಸಿಂಗ್, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್‌ಗಳ ಮುಖೇನ ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಕೆಎಲ್ಇ ಸಂಸ್ಥೆ ಅತ್ಯಮೂಲ್ಯ ಸೇವೆ ಸಲ್ಲಿಸುತ್ತಿದೆ. ಕಾಹೆರ ಗುಣಮಟ್ಟದ ಶಿಕ್ಷಣದ ಜತೆಗೆ ಆರೋಗ್ಯ ಸೇವೆ ಸಹ ಒದಗಿಸುತ್ತ ಸಮಾಜಕ್ಕೆ ಸಮರ್ಪಿಸಿಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದರು. ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ) ಸ್ವಾಯತ್ತ ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವದಲ್ಲಿ ಸ್ವರ್ಣ ಪದಕ ಪಡೆದ 35 ವಿದ್ಯಾರ್ಥಿಗಳಿಗೆ ಹಾಗೂ ಪದವಿ ಪಡೆದ 1,844 ವಿದ್ಯಾರ್ಥಿಗಳಿಗೆ ಅಭಿನಂದಿಸಿ, ಅವರು ಮಾತನಾಡಿದರು.
ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ) ರಾಜ್ಯದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಯಾಗಿದ್ದು, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಉನ್ನತ ಶಿಕ್ಷಣ, ಸಂಶೋಧನೆ ಮತ್ತು ಗುಣಮಟ್ಟದ ವೃತ್ತಿಪರ ಶಿಕ್ಷಣ ಒದಗಿಸುವ ಗುರಿಯೊಂದಿಗೆ ಅತ್ಯದ್ಭುತ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಈ ಸುದ್ದಿಯನ್ನೂ ಓದಿ | HPCL Recruitment 2025: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿದೆ 411 ಹುದ್ದೆ; ದ್ವಿತೀಯ ಪಿಯು ಪಾಸಾದವರು ಅಪ್ಲೈ ಮಾಡಿ
ಘಟಿಕೋತ್ಸವ ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಜೆಪಿ ನಡ್ಡಾ, ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಕುಲಪತಿ ಪ್ರೊ.ನಿತಿನ್ ಎಂ.ಗಂಗೆ, ಕುಲಸಚಿವ ಪ್ರೊ.ಎಂ.ಎಸ್. ಗಣಾಚಾರಿ ಮತ್ತಿತರ ಗಣ್ಯರು ಹಾಗೂ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.