ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮದುವೆಯಾಗದ ರೈತ ಮಕ್ಕಳ ಖಾತೆಗೆ 10 ಲಕ್ಷ ರುಪಾಯಿ ಹಾಕಿ; ಸರ್ಕಾರಕ್ಕೆ ಪುಟ್ಟಣ್ಣ ಆಗ್ರಹ

Puttanana: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ ಮಾತನಾಡಿ, ʼʼರಾಜ್ಯದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡುವವರೇ ಇಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಮಕ್ಕಳ ನೆರವಿಗೆ ಬರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಮಕ್ಕಳ ಖಾತೆಗೆ 10 ಲಕ್ಷ ರೂ. ಹಾಕಬೇಕುʼʼ ಎಂದು ಆಗ್ರಹಿಸಿದರು.

ರೈತರ ಮಕ್ಕಳ ಖಾತೆಗೆ 10 ಲಕ್ಷ ರುಪಾಯಿ ಹಾಕಿ; ಪುಟ್ಟಣ್ಣ ಆಗ್ರಹ

ಕಾಂಗ್ರೆಸ್‌ ಎಂಎಲ್‌ಸಿ ಪುಟ್ಟಣ್ಣ -

Ramesh B
Ramesh B Dec 18, 2025 8:57 PM

ಬೆಳಗಾವಿ, ಡಿ. 18: ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಸಮಸ್ಯೆ ಸದ್ಯ ಬೃಹದಾಕಾರವಾಗಿ ಬೆಳೆದಿದೆ. ಇದೀಗ ಈ ವಿಚಾರ ಸುವರ್ಣ ವಿಧಾನ ಸೌಧದದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ ಪ್ರತಿಧ್ವನಿಸಿತು (Karnataka Winter Session). ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ (Puttanana) ಈ ವಿಚಾರ ಪ್ರಸ್ತಾವಿಸಿ ಕೆಲ ಹೊತ್ತು ಸದನವನ್ನು ನಗೆಗಡಲಿನಲ್ಲಿ ತೇಲಿಸಿದರು. ʼʼರಾಜ್ಯದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡುವವರೇ ಇಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಮಕ್ಕಳ ನೆರವಿಗೆ ಬರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಮಕ್ಕಳ ಖಾತೆಗೆ 10 ಲಕ್ಷ ರೂ. ಹಾಕಬೇಕುʼʼ ಎಂದು ಪುಟ್ಟಣ್ಣ ಆಗ್ರಹಿಸಿದರು.

ಶೂನ್ಯ ವೇಳೆಯಲ್ಲಿ ಸರ್ಕಾರದ ಗಮನ ಸೆಳೆದ ಅವರು, ʼʼರಾಜ್ಯದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡುವವರೇ ಇಲ್ಲ. ಈ ಹಿನ್ನೆಲೆಯಲ್ಲಿ ತಾಲೂಕುವಾರು ಮಠಗಳನ್ನು ಸರ್ಕಾರ ನಿರ್ಮಿಸಲಿ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಕೆಲವರು ಈಗಾಗಲೇ ಹೆಣ್ಣು ಸಿಗಲಿ ಎಂದು ಮಲೆಮಹದೇಶ್ವರ ಮತ್ತು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ. ಮದುವೆಯಾಗದ ರೈತರ ಮಕ್ಕಳಿಗಾಗಿ ಪ್ರೋತ್ಸಾಹ ಧನ ಯೋಜನೆ ರೂಪಿಸಬೇಕುʼʼ ಎಂದು ಆಗ್ರಹಿಸಿದರು.

ʼʼಸರ್ಕಾರ ರೈತರ ಮಕ್ಕಳ ನೆರವಿಗೆ ಬರಬೇಕು. ಹಾಗೆ ನೋಡಿದರೆ 25 ಲಕ್ಷ ರುಪಾಯಿ ಕೊಟ್ಟರೆ ಉತ್ತಮ. ಆದರೆ ಕನಿಷ್ಠ 10 ಲಕ್ಷ ರುಪಾಯಿ ಠೇವಣಿ ಇಡುವಂತಾಗಬೇಕು. ಈ ಮೂಲಕ ರೈತರ ಮಕ್ಕಳನ್ನು ಮದುವೆಯಾಗಲು ಉತ್ತೇಜನ ನೀಡಬೇಕುʼʼ ಎಂದು ಹೇಳಿದರು.

ಈ ವಿಚಾರವನ್ನು ಕೆಲವರು ಮೇಜು ಕುಟ್ಟಿ ಸ್ವಾಗತಿಸಿದರು. ಈ ವೇಳೆ ಸರ್ಕಾರದ ಪರ ಉತ್ತರ ನೀಡಿದ ಸಭಾನಾಯಕ ಬೋಸರಾಜ್ ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರುವುದಾಗಿ ಹೇಳಿದರು.

ನಗರ ಯೋಜನೆಗಾಗಿ ಪ್ರತ್ಯೇಕ ಕಾಲೇಜು: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ

ಕಿತ್ತೂರು ಕರ್ನಾಟಕ, ಉತ್ತರ ಕರ್ನಾಟಕ ಮತ್ತು ಮತ್ತು ಕಲ್ಯಾಣ ಕರ್ನಾಟಕದ ಹಲವು ಸಮಸ್ಯೆಗಳು ವಿಧಾನ ಪರಿಷತ್‌ನಲ್ಲಿ ಮೊಳಗಿದವು. ಕಿತ್ತೂರು ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸರ್ಕಾರ ಕಿತ್ತೂರು ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ರಚಿಸುವಂತೆ ಒತ್ತಾಯ ಕೇಳಿ ಬಂತು. ಬುಧವಾರ ಭೋಜನ ವಿರಾಮದ ನಂತರ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಕುರಿತ ನಡೆದ ಚರ್ಚೆಯಲ್ಲಿ ಬಿಜೆಪಿಯ ಶಶೀಲ್ ನಮೋಶಿ, ವೈ.ಎಂ. ಸತೀಶ್, ಹೇಮಲತಾ ನಾಯಕ್‌, ಕಾಂಗ್ರೆಸ್ ನ ಜಕ್ಕಪ್ಪನವರ್, ಎಂ.ನಾಗರಾಜ್ ಮಾತನಾಡಿದರು.

ಗೃಹಲಕ್ಷ್ಮೀ ಯೋಜನೆ ಬಗ್ಗೆ ಅಪ್‌ಡೇಟ್

ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸಿರುವುದರಿಂದ ಬುಧವಾರ ಸದನದಲ್ಲಿ ಗದ್ದಲ ಉಂಟಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದವು. ಈ ಬಗ್ಗೆ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸ್ಪಷ್ಟನೆ ನೀಡಿ​, ಆದಷ್ಟು ಬೇಗ ಮಹಿಳೆಯರ ಖಾತೆಗೆ ‌ಹಣ ಹಾಕುತ್ತೇವೆ ಎಂದು ತಿಳಿಸಿದ್ದಾರೆ.