ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Winter Session: ಚಳಿಗಾಲದ ಅಧಿವೇಶನ ಅವಧಿ ಒಂದು ವಾರ ವಿಸ್ತರಿಸಿ; ಸ್ಪೀಕರ್‌ಗೆ ಆರ್‌.ಅಶೋಕ್‌ ಪತ್ರ

ಈ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಹಳಷ್ಟು ವಿಷಯಗಳು ಬಾಕಿಯಿದೆ. ಹೀಗಾಗಿ ತಾವು ಪ್ರಸ್ತುತ ಅಧಿವೇಶನದ ಅವಧಿಯನ್ನು ಒಂದು ವಾರ ವಿಸ್ತರಿಸಬೇಕು ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ವಿಪಕ್ಷ ನಾಯಕ ಆ.ಅಶೋಕ್‌ ಒತ್ತಾಯಿಸಿದ್ದಾರೆ.

ಚಳಿಗಾಲದ ಅಧಿವೇಶನ ಅವಧಿ ಒಂದು ವಾರ ವಿಸ್ತರಿಸಿ: ಆರ್‌.ಅಶೋಕ್‌ ಆಗ್ರಹ

ವಿಪಕ್ಷ ನಾಯಕ ಆರ್‌.ಅಶೋಕ್‌ -

Prabhakara R
Prabhakara R Dec 15, 2025 2:42 PM

ಬೆಳಗಾವಿ: ರಾಜ್ಯ ಚಳಿಗಾಲದ ಅಧಿವೇಶನದ (Karnataka Winter Session) ಅವಧಿ ಒಂದು ವಾರ ವಿಸ್ತರಿಸಬೇಕು ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಅವರು ಪತ್ರ ಬರೆದು ಆಗ್ರಹಿಸಿದ್ದಾರೆ. ಡಿ. 8ರಿಂದ 19ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ 10 ದಿನಗಳ ಅಧಿವೇನದಲ್ಲಿ 2 ದಿನದ ಅಧಿವೇಶನದ ಸಮಯ ಮೊಟುಕುಗೊಂಡಿದೆ. ಹೀಗಾಗಿ ಅಧಿವೇಶನ ಅವಧಿ ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಹಳಷ್ಟು ವಿಷಯಗಳು ಬಾಕಿಯಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ತಾವು ಪ್ರಸ್ತುತ ಅಧಿವೇಶನವನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮೂಡಿಗೆರೆಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ; ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ರಾಜೇಗೌಡ ಟಿ.ಟಿ ಅವರ ಪ್ರಶ್ನೆಗೆ ತೋಟಗಾರಿಕೆ ಸಚಿವರ ಪರವಾಗಿ ರಾಮಲಿಂಗಾರೆಡ್ಡಿ ಅವರು ಉತ್ತರ ನೀಡಿದರು.

ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಗುರುತಿಸಲಾಗಿದ್ದ ಜಾಗದ ಭೌತಿಕ ಪರಿಶೀಲನೆಯನ್ನು ಸಾಂಬಾರು ಮಂಡಳಿ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಕೈಗೊಂಡಾಗ, ಸದರಿ ಜಾಗವು ಸ್ಪೈಸ್ ಪಾರ್ಕ್ ನಿರ್ಮಾಣ ಮಾಡಲು ಸೂಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸೂಕ್ತವಾದ ಪರ್ಯಾಯ ಜಾಗವನ್ನು ನೀಡಲು ಕೋರಲಾಗಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಗೋಣಿಬೀಡು ಹೋಬಳಿ ಬೆಟ್ಟದಮನೆ ಗ್ರಾಮದಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ ಉದ್ದೇಶಕ್ಕಾಗಿ ತೋಟಗಾರಿಕೆ ಇಲಾಖೆಗೆ ಭೂಮಿ ವರ್ಗಾಯಿಸಿ, ದಿನಾಂಕ 30-5-2025ರಂದು ಆದೇಶ ಹೊರಡಿಸಲಾಗಿದೆ.

ಜಮೀನಿನ ಹದ್ದುಬಸ್ತು ಗುರುತಿಸುವಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಪ್ರಸ್ತುತ ವ್ಯವಹರಣಾ ಸಮಾಲೋಚಕರನ್ನು ನೇಮಿಸಿ ವರದಿಯನ್ನು ಸಿದ್ದಪಡಿಸಲು ಸೂಚಿಸಲಾಗಿರುತ್ತದೆ. ವರದಿ ಬಂದ ಕೂಡಲೇ ಆದಷ್ಟು ಶೀಘ್ರವಾಗಿ ಸ್ಪೈಸ್ ಪಾರ್ಕ್ ಕಾರ್ಯಾರಂಭಗೊಳಿಸಲಾಗುವುದು ಎಂದು ತಿಳಿಸಿದರು.