#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Ramadurga News: ತಾಲೂಕಿನ ಜನತೆಗೆ ಮೂಲ ಸೌಲಭ್ಯ ಕಲ್ಪಿಸಲು ಅಗತ್ಯ ಅನುದಾನ ಮಂಜೂರು: ಅಶೋಕ ಪಟ್ಟಣ ಭರವಸೆ

ಸಕ್ತ ಸಾಲಿನಲ್ಲಿ ತಾಲೂಕಿನ ಪ್ರಮುಖ ರಸ್ತೆಗಳ ಸುಧಾರಣೆಗೆ ರಾಜ್ಯ ಸರಕಾರ ದಿಂದ ಸುಮಾರು 70 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ. ಮುಂಬರುವ ದಿನಗಳಲ್ಲಿ ತಾಲೂಕಿನ ಜನತೆಗೆ ಮೂಲ ಸೌಲಭ್ಯ ಒದಗಿಸಲು ಸರಕಾರದಿಂದ ಅನುದಾನ ಮಂಜೂರು ಮಾಡಿಸಿ, ಕ್ಷೇತ್ರದ ಪ್ರಗತಿಗೆ ಶ್ರಮಿಸುತ್ತೇನೆ

ಪುರಸಭೆ ವ್ಯಾಪ್ತಿಯಲ್ಲಿ 20 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತಿದೆ

ಪಟ್ಟಣದ ತೇರ ಬಜಾರದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ, ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಮಾತನಾಡಿದರು.

Profile Ashok Nayak Jan 26, 2025 9:06 PM

ರಾಮದುರ್ಗ: ಪ್ರಸಕ್ತ ಸಾಲಿನಲ್ಲಿ ತಾಲೂಕಿನ ಪ್ರಮುಖ ರಸ್ತೆಗಳ ಸುಧಾರಣೆಗೆ ರಾಜ್ಯ ಸರಕಾರ ದಿಂದ ಸುಮಾರು 70 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ. ಮುಂಬರುವ ದಿನಗಳಲ್ಲಿ ತಾಲೂಕಿನ ಜನತೆಗೆ ಮೂಲ ಸೌಲಭ್ಯ ಒದಗಿಸಲು ಸರಕಾರದಿಂದ ಅನುದಾನ ಮಂಜೂರು ಮಾಡಿಸಿ, ಕ್ಷೇತ್ರದ ಪ್ರಗತಿಗೆ ಶ್ರಮಿಸುತ್ತೇನೆ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ಪಟ್ಟಣದ ತೇರ ಬಜಾರದಲ್ಲಿ 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ವಿವಿಧ ವಾರ್ಡಗಳಲ್ಲಿ ಒಳಚರಂಡಿ ನಿರ್ಮಾಣಕ್ಕೆ 16 ಕೋಟಿ ಅನುದಾನ ಮಂಜುರಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ 20 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: Ramadurga: ರಾಮದುರ್ಗ: ಭೂ ದಾಖಲೆಗಳ ಅಭಿಲೇಖಾಲಯದ ಗಣಕೀರಣ ವ್ಯವಸ್ಥೆಗೆ ಚಾಲನೆ

ಪದಮAಡಿ, ಸಾಲಾಪೂರ, ಮುದೇನೂರ, ಬುದ್ನಿಕುರ್ದ, ಖಾನಪೇಠ ಗ್ರಾಮಗಳ ಜನತೆಗೆ ವಿದ್ಯುತ್ ಒದಗಿಸಲು ಹೊಸದಾಗಿ 110 ಕೆ.ವ್ಹಿ. ವಿದ್ಯುತ್ ಪರಿವರ್ತಕ ಕೇಂದ್ರಗಳ ಸ್ಥಾಪನೆಗೆ ಮಂಜುರಾತಿ ದೊರೆತಿದೆ. ಶೀಘ್ರದಲ್ಲಿ ವಿವಿಧೆಡೆ ವಿದ್ಯುತ್ ಪರಿವರ್ತನಾ ಕೇಂದ್ರಗಳ ಮೇಲ್ದರ್ಜೆಗೆರಿಸಲು ಕ್ರಮ ತೆಗೆದುಕೊಳ್ಳುತ್ತೇನೆ. ಮುಖ್ಯಮಂತ್ರಿಗಳ 10 ಕೋಟಿ ವಿಶೇಷ ಅನುದಾನದಲ್ಲಿ ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಲ್ಲಿ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸುಧಾರಣೆಗೆ ಕ್ರಿಯಾ ಯೋಜನೆ ಸಲ್ಲಿಸಲಾಗಿದ್ದು, ಶೀಘ್ರ ಕೆಲಸ ಪ್ರಾರಂಭಿಸಲಾಗುತ್ತದೆ ಎಂದರು.

ದೇಶಕ್ಕೆ ಸ್ವಾತಂತ್ರ ತಂದುಕೊಟ್ಟ ಮಹನೀಯರನ್ನು ನೆನೆಯುವ ಸಲುವಾಗಿ ಹಾಗೂ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ ಪ್ರಯತ್ನದ ಫಲವಾಗಿ ದೇಶದ ಸಂವಿಧಾನ ಜಾರಿಗೆ ಬಂದ ದಿನವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಜನತೆ ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಸಹಕಾರ ನೀಡಬೇಕು ಅಂದಾಗ ಗಣರಾಜ್ಯೋತ್ಸವ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದರು.

ಅರಮನೆ ಆವರಣದಲ್ಲಿ ತಾಲೂಕಾ ಆಡಳಿತದ ಪರವಾಗಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಧ್ವಜಾರೋಹಣ ನೆರವೇರಿಸಿ ಸಂದೇಶ ವಾಚನ ಮಾಡಿ, ದೇಶದ ಏಕತೆ, ಜಾತ್ಯಾತೀತಯನ್ನು ಅರಿತು ಕೊಂಡು ಸಂವಿಧಾನದ ಆಶಯಗಳನ್ನು ಎಲ್ಲರೂ ಎತ್ತಿ ಹಿಡಿಯಬೇಕು ಎಂದ ಅವರು, ವಿದ್ಯಾರ್ಥಿ ಗಳು ಪಠ್ಯಪುಸ್ತಕಗಳ ಓದಿನ ಕಡೆಗೆ ಗಮನ ಹರಿಸಿದಲ್ಲಿ ಉನ್ನತ ಸಾಧನೆ ಸಾಧ್ಯವಿದೆ ಎಂದು ಕರೆ ನೀಡಿದರು.

ಆಕರ್ಷಕ ಪಥಸಂಚಲನಃ

ಪಟ್ಟಣದ ಅರಮನೆ ಆವರಣದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಧ್ವಜಾರೋಹಣ ನೆರವೇರಿಸಿದ ನಂತರ, ಪೊಲೀಸ್ ಪೇದೆ, ಗೃಹರಕ್ಷಕ ದಳ, ಎನ್.ಸಿ.ಸಿ ಕೆಡೆಟ್‌ಗಳಿಂದ ಆಕರ್ಷಕ ಪಥ ಸಂಚಲನ ನೆರವೇರಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ಮಹನೀಯರನ್ನು ಸತ್ಕರಿಸ ಲಾಯಿತು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಲಕ್ಷಿö್ಮÃ ಕಡಕೋಳ, ಉಪಾಧ್ಯಕ್ಷೆ ಸರಿತಾ ಧೂತ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ, ಡಿವೈಎಸ್‌ಪಿ ಚಿದಂಬರ ಮಡಿವಾಳರ, ಸಿಪಿಐ ಐ.ಆರ್. ಪಟ್ಟಣಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ, ಪುರಸಭೆ ಸದಸ್ಯರು, ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಇತರರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಆನಂದತೀರ್ಥ ಜೋಶಿ ಹಾಗೂ ಮುಖ್ಯೋಪಾಧ್ಯಾಯ ಪಿ.ಡಿ. ಕಾಲವಾಡ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.