Santosh Jarkiholi: ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ; ಪ್ರಕರಣ ದಾಖಲು
Santosh Jarkiholi: ಗೋಕಾಕ್ ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಜಾತ್ರೆಯಲ್ಲಿ ಸಾವಿರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.


ಗೋಕಾಕ್: ಪಟ್ಟಣದ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗುತ್ತಿದ್ದು ಈ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸಾವಿರಾರು ಜನ ಜಾತ್ರೆಯಲ್ಲಿ ಪಾಲ್ಗೊಂಡ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಈ ಸಂಬಂಧ ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ ಸಂತೋಷ್ ಜಾರಕಿಹೊಳಿ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಜಾತ್ರೆಯಲ್ಲಿ ಸಾವಿರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Assault Case: ಮಾಡೆಲ್ ಮೇಲೆ ಖಾಸಗಿ ಬಸ್ ಸಿಬ್ಬಂದಿ ಹಲ್ಲೆ, ಬೆಲೆಬಾಳುವ ಸ್ವತ್ತುಗಳ ಸುಲಿಗೆ
ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಗೆ ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ (Physical Abuse) ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್‌ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿದಿದ್ದಾರೆ.
ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಆರೋಪಿ, ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಗರ್ಭಿಣಿಯಾದ ವಿಚಾರ ತಿಳಿದು ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎಂಬುವರ ಪುತ್ರ ಕೃಷ್ಣ ರಾವ್ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸಂತ್ರಸ್ತ ಯುವತಿ ಹಾಗೂ ಆರೋಪಿ ಕೃಷ್ಣ ಪುತ್ತೂರಿನಲ್ಲಿ ಹೈಸ್ಕೂಲ್‌ನಲ್ಲಿ ಓದುವಾಗ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇಬ್ಬರೂ ಮಂಗಳೂರಿನ ಖಾಸಗಿ ಕಾಲೇಜಿಗೆ ಸೇರಿಕೊಂಡಿದ್ದರು. 2024ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮನೆಯಲ್ಲಿ ಯಾರೂ ಇಲ್ಲದಾಗ ಯುವತಿಯನ್ನು ಮನೆಗೆ ಕರೆಸಿಕೊಂಡು ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ನಂತರ 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ. ಇದರಿಂದ ತಾನು ಗರ್ಭಿಣಿ ಆಗಿರುವ ವಿಚಾರವನ್ನು ಯುವತಿ ಕೃಷ್ಣ ರಾವ್ ಗೆ ತಿಳಿಸಿದ್ದಳು. ಇದರಿಂದ ಮದುವೆಯಾಗಲು ಕೃಷ್ಣ ರಾವ್ ನಿರಾಕರಿಸಿದ್ದ.
ಇದರಿಂದ ನೊಂದ ಯುವತಿ ಜೂನ್ 24ರಂದು ರಾತ್ರಿ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಾದ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಕೃಷ್ಣ ರಾವ್ ತಲೆ ಮರೆಸಿಕೊಂಡಿದ್ದ. ಪುತ್ತೂರು ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಈ ಸುದ್ದಿಯನ್ನೂ ಓದಿ | Praveen Nettaru murder case: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ
ಆರೋಪಿ ಶ್ರೀಕೃಷ್ಣ ಜೆ.ರಾವ್ ತಂದೆ ಪಿ.ಜಿ.ಜಗನ್ನಿವಾಸ ರಾವ್ ಅವರು, ಪುತ್ರನಿಗೆ ಜೂ.23ಕ್ಕೆ 21 ವರ್ಷ ತುಂಬಿದ ಬಳಿಕ ವಿವಾಹ ಮಾಡಿಕೊಡುವುದಾಗಿ ಠಾಣೆಯಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿದ್ದರು. ಒಂದು ವೇಳೆ ಮಗ ವಿವಾಹಕ್ಕೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಬಹುದೆಂದೂ ತಿಳಿಸಿದ್ದರು. ಆದರೆ ನಂತರ ಸಂತ್ರಸ್ತೆಯನ್ನು ವಿವಾಹವಾಗಲು ಯುವಕ ಒಪ್ಪದ ಹಿನ್ನೆಲೆಯಲ್ಲಿ ಜು.24ರಂದು ಸಂತ್ರಸ್ತ ಯುವತಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ.