Road Accident: ಭೀಕರ ರಸ್ತೆ ಅಪಘಾತ; ಪಿಯುಸಿ ವಿದ್ಯಾರ್ಥಿ ಸಾವು
ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಜರುಗಿದೆ. ಮುಗಳಖೋಡ ಪಟ್ಟಣದ ಅಮೋಘ ಸಪ್ತಸಾಗರ (18) ಮೃತ ಯುವಕ. ಈತ ಹಾರೂಗೇರಿ ಪಟ್ಟಣದ ಖಾಸಗಿ ಕಾಲೇಜು ಒಂದರಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ.
![road accident](https://cdn-vishwavani-prod.hindverse.com/media/images/road_accident.max-1280x720.jpg)
![Profile](https://vishwavani.news/static/img/user.png)
ಬೆಳಗಾವಿ: ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ (Road Accident) ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.
ಮುಗಳಖೋಡ ಪಟ್ಟಣದ ಅಮೋಘ ಸಪ್ತಸಾಗರ (18) ಮೃತ ಯುವಕ. ಈತ ಹಾರೂಗೇರಿ ಪಟ್ಟಣದ ಖಾಸಗಿ ಕಾಲೇಜು ಒಂದರಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಹಾರೂಗೇರಿ ಹಾಗೂ ಮುಗಳಖೋಡ ಮಾರ್ಗಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹಾರೂಗೇರಿ ಪಟ್ಟಣದಲ್ಲಿ ಇದ್ದ ತನ್ನ ಅಜ್ಜಿಯನ್ನು ಕರೆತರಲು ಯುವಕ ಅಮೋಘ ಸಪ್ತಸಾಗರ ಬರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಹಾರೂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Self Harming: ಸಾಲಗಾರರ ಕಿರುಕುಳ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಬೆಳಗಾವಿ: ಸಾಲಗಾರರ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬರು ಬೊಲೆರೊ ಗೂಡ್ಸ್ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಬುಧವಾರ ರಾತ್ರಿ ಜರುಗಿದೆ. ಬೈಲಹೊಂಗಲ ಪಟ್ಟಣದ ಸಾಯಿ ಮಂದಿರ ಬಳಿಯ ನಿವಾಸಿ ರಫೀಕ ಬಾಬುಸಾಬ ತಿಗಡಿ (38) ಸಾವನ್ನಪ್ಪಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತರು ಕೆಲ ಖಾಸಗಿ ವ್ಯಕ್ತಿಗಳ ಕಡೆ 6 ಲಕ್ಷ ರೂ.ಗೂ ಹೆಚ್ಚು ಹಣ ಸಾಲ ಪಡೆಕೊಂಡಿದ್ದರು ಎನ್ನಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಲಗಾರರು ಪದೇ ಪದೆ ಮನೆಗೆ ಬಂದು ಕಿರುಕುಳ ನೀಡಿದ್ದರಿಂದ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Maha Kumbh Mela: ಮಹಾ ಕುಂಭಮೇಳದಿಂದ ಮರಳುತ್ತಿದ್ದ ಬೆಳಗಾವಿಯ ವ್ಯಕ್ತಿ ಹೃದಯಾಘಾತದಿಂದ ಸಾವು