ಬೆಳಗಾವಿ: ಬೆಳಗಾವಿಯಲ್ಲಿ (Belagavi news) ಗ್ರಾಮ ಪಂಚಾಯತಿ ಸದಸ್ಯನೊಬ್ಬ ಗೂಂಡಾ ವರ್ತನೆಯನ್ನು ತೋರಿದ್ದಾನೆ. ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಾಬಾಜಾನ್ ಖಾಲಿಮುಂಡಾಸೈ ಗೂಂಡಾವರ್ತನೆ ತೋರಿದ ಗ್ರಾಮ ಪಂಚಾಯಿತಿ ಸದಸ್ಯ. ಈ ಕುರಿತಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (Viral News) ದಾಖಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಪಂ ಸದಸ್ಯನನ್ನು ಬಂಧಿಸಲಾಗಿದೆ.
ಎರಡು ದಿನಗಳ ಹಿಂದೆ ಹುಟ್ಟುಹಬ್ಬ ಆಚರಿಸಿಕೊಂಡ ಬಾಬಾಜಾನ್ ಖಾಲಿಮುಂಡಾಸೈ, ಕೈಯಲ್ಲಿ ಚಾಕು ಹಿಡಿದು ನಡುರಸ್ತೆಯಲ್ಲೇ ಸಂಭ್ರಮಾಚರಣೆ ಮಾಡಿದ್ದಾರೆ. ಪಕ್ಕದಲ್ಲೇ ಪೊಲೀಸ್ ಠಾಣೆ ಇದ್ದರೂ ಯಾವುದೇ ಭಯ ಇಲ್ಲದೆ ಈತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಬಾಜಾನ್ರನ್ನು ಪೊಲೀಸರು ಬಂಧಿಸಿದ್ದಾರೆ.
ಬರ್ತ್ ಡೇ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇರೆಗೆ ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 59 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಸೈಯದ್ ಅಲ್ತಾಫ್ ಅಹ್ಮದ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಕಳೆದ ಸೆಪ್ಟೆಂಬರ್ 22 ರಂದು ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಉದ್ಯಮಿ ಸೈಯದ್ ಅಲ್ತಾಫ್ ಅಹ್ಮದ್ ಗಾಳಿಯಲ್ಲಿ ಆರು ಸುತ್ತು ಗುಂಡು ಹಾರಿಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಸುದ್ದಿಯನ್ನೂ ಓದಿ: Triple Murder Case: ಕೊಲೆಯಾದ ರೌಡಿಶೀಟರ್ ಪತ್ನಿಯ ಶಪಥ ಈಡೇರಿಸಲು ತ್ರಿವಳಿ ಕೊಲೆ! 10 ಆರೋಪಿಗಳ ಸೆರೆ
ಬನ್ನೇರುಘಟ್ಟ ರಸ್ತೆಯಲ್ಲಿರುವ ಸ್ಕ್ರ್ಯಾಪ್ ಗೋಡೌನ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸೈಯದ್ ಅಲ್ತಾಫ್ ಅಹ್ಮದ್ ಇತರ 200 ಸದಸ್ಯರೊಂದಿಗೆ ಮೊಯಿನ್ ಖಾನ್ ಅವರ ಹುಟ್ಟುಹಬ್ಬದ ಸಂತೋಷಕೂಟದಲ್ಲಿ ಭಾಗಿಯಾಗಿದ್ದರು. ಆಚರಣೆಯ ಸಂದರ್ಭದಲ್ಲಿ, ಅಹ್ಮದ್ ತನ್ನ ಪರವಾನಗಿ ಪಡೆದ ಪಿಸ್ತೂಲ್‌ನಿಂದ ಅಜಾಗರೂಕವಾಗಿ ಗಾಳಿಯಲ್ಲಿ ಮನಸೋ ಇಚ್ಛೆ ಗುಂಡು ಹಾರಿಸಿದ್ದರು.