ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sugar Cane Farmers Protest: ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR

ಬೆಳಗಾವಿಯಲ್ಲಿ (Belagavi) ನಡೆಯುತ್ತಿದ್ದ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಇದೀಗ ಕಲ್ಲು ತೂರಾಟ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹತ್ತರಗಿ ಗ್ರಾಮದಲ್ಲಿ ಕಲ್ಲುತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ.

ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ರೈತರು ಪ್ರತಿಭಟನೆ ನಡೆಸಿದರು

ಬೆಳಗಾವಿ: ಕಬ್ಬು ಬೆಳಗಾರರ ಪ್ರತಿಭಟನೆ (Sugar Cane Farmers Protest) ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ (Stones pelted) ಕಾರಣವಾಗಿತ್ತು. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದರು. ಇದರಿಂದ ಸಿಟ್ಟಿಗೆದ್ದ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ (Belagavi) ನಡೆಸಿದ್ದರು. ಇದೀಗ ಕಲ್ಲು ತೂರಾಟ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹತ್ತರಗಿ ಗ್ರಾಮದಲ್ಲಿ ಕಲ್ಲುತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪಿ ಎಸ್ ಐ ಆರ್ ವಿ ಪಾಟೀಲ್ ನೀಡಿದ ದೂರಿನ ಅನ್ವಯ 11 ಆರೋಪಿಗಳು ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತಿಭಟನೆಯ ವೇಳೆ ಪೊಲೀಸರನ್ನು ಕೊಲೆ ಮಾಡುವ ಉದ್ದೇಶದಿಂದ ಕಲ್ಲುತೂರಾಟ ಮಾಡಿ ಪೊಲೀಸರನ್ನು ಒದ್ದು ಹಲ್ಲೆ ಮಾಡಿದ್ದಾರೆ ತೀವ್ರ ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳ ವಿರುದ್ಧ ಬಿಎನ್ಎಸ್ ಕಾಯ್ದೆಯ ಅಡಿ 189(2), 191(2), 191(3), 285, 132, 121(1), 121(2), 109, 324, 194 ಮತ್ತು ಸಾರ್ವಜನಿಕ ಆಸ್ತಿ ಹಾನಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಘಟನೆಯಲ್ಲಿ 100 ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿವೆ. 2 ಪೊಲೀಸ್ ವ್ಯಾನ್‌ ಹಾಗೂ ಬಸ್‌ಗಳಿಗೆ ಸಂಪೂರ್ಣ ಹಾನಿಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಸುದ್ದಿಯನ್ನೂ ಓದಿ: Sugarcane Farmers Protest: ಬೆಳಗಾವಿಯಲ್ಲಿ 3 ಕಿ.ಮೀ.ವರೆಗೆ ಪೊಲೀಸರನ್ನು ಬೆನ್ನಟ್ಟಿ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರು

ಸದ್ಯ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಸಿಸಿಟಿವಿ ಮೊಬೈಲ್ ಕ್ಯಾಮೆರಾ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪೊಲೀಸರಿಗೆ ಸಮ್ಯಮದಿಂದ ವರ್ತಿಸಬೇಕು. ರೈತರ ಮೇಲೆ ಬಲಪ್ರಯೋಗ ಮಾಡಬಾರದು ಎಂದು ಸೂಚಿಸಲಾಗಿದೆ. ಕಲ್ಲು ತೂರಾಟ ನಡೆದರು ಪೊಲೀಸರು ಸಮ್ಯಮದಿಂದ್ದಾರೆ. ನಾವು ಲಾಠಿ ಚಾರ್ಚ್ ಮಾಡಿಲ್ಲ ಎಂದು ಸಹ ಪೊಲೀಸರ ಹೇಳಿದ್ದಾರೆ. ರೈತರು ದಯಾಮಾಡಿ ಸರ್ಕಾರಕ್ಕೆ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ. ನಾವು ರೈತರ ಪರವಾಗಿದ್ದೇವೆ ಎಂದು ಹೇಳಿದ್ದರು.

ರೈತರಿಗೆ ಮಣಿದ ಸರ್ಕಾರ

ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಪ್ರತಿ ಟನ್‌ ಕಬ್ಬಿಗೆ 3,300 ರೂ. ಬೆಲೆ ನಿಗದಿ ಮಾಡಿ ಆದೇಶ ಹೊರಡಿಸಿದೆ. ರೈತರ ಬೇಡಿಕೆ ಪ್ರತಿ ಟನ್ ಗೆ 3,500 ಇತ್ತು. ಆದರೆ 3,300 ರೂಪಾಯಿ ನೀಡಲು ಸರ್ಕಾರ ಒಪ್ಪಿಕೊಂಡಿದೆ. ಸಕ್ಕರೆ ಕಾರ್ಖಾನೆಗಳು 50 ರೂ. ಹಾಗೂ ರಾಜ್ಯ ಸರ್ಕಾರ 50 ರೂ. ರೈತರಿಗೆ ಸಬ್ಸಿಡಿ ನೀಡಲೂ ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು, ಬೆಳಗಾವಿ ಕಬ್ಬು ಬೆಳೆಗಾರರ ಪ್ರತಿಭಟನೆ ವಾಪಸ್‌ ಪಡೆಯಬೇಕೆಂದು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.