Self Harming: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ
Self Harming: ವಿದ್ಯಾರ್ಥಿನಿ ಸೋಮವಾರ ಎಸ್‌ಎಸ್‌ಎಲ್‌ಸಿ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಬೆಳಗಾವಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ನಡೆದಿದೆ. ದೀಪಿಕಾ ರಾಜೇಂದ್ರ ಬಡಿಗೇರ (16) ಮೃತ ವಿದ್ಯಾರ್ಥಿನಿ. ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಸೋಮವಾರ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿನಿಯ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ | Honey trap Case: ಹನಿಟ್ರ್ಯಾಪ್ ತನಿಖೆಗೆ ಕೋರಿದ ಪಿಐಎಲ್ ವಜಾ ಮಾಡಿದ ಸುಪ್ರೀಂ ಕೋರ್ಟ್
ಪಿಜಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ
ಬೆಳಗಾವಿ: ಪಿಜಿಯೊಂದರಲ್ಲಿ ಎಂಬಿಎ ಪದವೀಧರ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ನೆಹರು ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ. ಯುವತಿ ಆತ್ಮಹತ್ಯೆಗೆ ಲವ್ ಬ್ರೇಕಪ್ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.
ವಿಜಯಪುರ ಜಿಲ್ಲೆಯ ಐಶ್ವರ್ಯ ಲಕ್ಷ್ಮೀ ಗಲಗಲಿ ಮೃತ ಯುವತಿ. ವಿಜಯಪುರದಲ್ಲಿಯೇ ಎಂಬಿಎ ಪದವಿ ಪೂರ್ಣಗೊಳಿಸಿದ್ದ ಐಶ್ವರ್ಯ ಲಕ್ಷ್ಮೀ ಕೆಲಸಕ್ಕಾಗಿ ಬೆಳಗಾವಿಗೆ ಬಂದಿದ್ದರು. ಕಳೆದ ಮೂರು ತಿಂಗಳಿನಿಂದ ಬೆಳಗಾವಿಯ ಸಾಯಿಕೃಪಾ ಪಿಜಿಯಲ್ಲಿ ವಾಸವಿದ್ದರು. ಬೆಳಗಾವಿಯ ಖಾಸಗಿ ಕಂಪನಿಯಲ್ಲಿ ಕಲಿಕಾ ತರಬೇತಿ ಅವಧಿಯಲ್ಲಿದ್ದರು. ಮಂಗಳವಾರ ಸಂಜೆ ಅವಧಿಯಲ್ಲಿ ಐಶ್ವರ್ಯ ಪಿಜಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು, ಐಶ್ವರ್ಯಲಕ್ಷ್ಮೀ ಮೊಬೈಲ್ ಕಾಲ್ ಡಿಟೇಲ್ಸ್ ಪರಿಶೀಲನ ನಡೆಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯುವತಿ ಆತ್ಮಹತ್ಯೆಗೆ ಅಸಲಿ ಕಾರಣ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ.