ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

T20 World Cup final: ಟಿ20 ವಿಶ್ವಕಪ್ ಫೈನಲ್‌; ಟೀಂ ಇಂಡಿಯಾ ಗೆಲುವಿಗಾಗಿ ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ದೇವಸ್ಥಾನಗಳಲ್ಲಿ ಅಭಿಮಾನಿಗಳ ಪೂಜೆ

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗಾಗಿ ದೇಶಾದ್ಯಂತ ದೇವಸ್ಥಾನಗಳಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಅದೇ ರೀತಿ ರಾಜ್ಯದ ಬೆಳಗಾವಿ, ಮೈಸೂರು ಸೇರಿ ವಿವಿಧೆಡೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

ಟೀಂ ಇಂಡಿಯಾ ಗೆಲುವಿಗಾಗಿ ರಾಜ್ಯದ ವಿವಿಧೆಡೆ ಅಭಿಮಾನಿಗಳ ಪೂಜೆ

ಟೀಂ ಇಂಡಿಯಾ ಗೆಲುವಿಗಾಗಿ ಬೆಳಗಾವಿಯ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳ ಪೂಜೆ. -

Prabhakara R
Prabhakara R Mar 8, 2026 5:01 PM

ಬೆಂಗಳೂರು: ಅಹಮದಾಬಾದ್‌ನ​ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಟಿ-20 ವಿಶ್ವಕಪ್ ಫೈನಲ್‌ನಲ್ಲಿ (T20 World Cup final) ನ್ಯೂಜಿಲೆಂಡ್‌ ವಿರುದ್ಧ ಭಾರತ ತಂಡ (India vs New Zealand) ಜಯಿಸಲಿ ಎಂದು ಪ್ರಾರ್ಥಿಸಿ ಬೆಳಗಾವಿ, ಮೈಸೂರು ಸೇರಿ ರಾಜ್ಯದ ವಿವಿಧೆಡೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬೆಳಗಾವಿ ಗಣೇಶ ದೇವಸ್ಥಾನದಲ್ಲಿ ಕರವೇ ಪೂಜೆ

Belagavi puja

ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದ ಬಳಿಯ ಗಣೇಶ ದೇವಸ್ಥಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ಕಾರ್ಯಕರ್ತರು, ಜಿಲ್ಲಾಧ್ಯಕ್ಷರಾದ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಇಂದು ಭಾರತ ತಂಡದ ಭಾವಚಿತ್ರ ಹಿಡಿದು ಗಣಪತಿ ದೇವರಿಗೆ ಪೂಜೆ ಸಲ್ಲಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ದೀಪಕ ಗುಡಗನಟ್ಟಿ ಅವರು, ಭಾರತ ಗೆಲುವಿಗಾಗಿ ಗಣಪತಿ ದೇವರಿಗೆ ಪೂಜೆ ಸಲ್ಲಿಸಿ ಶುಭ ಕೋರಲಾಗಿದೆ. ಭಾರತ ಗೆದ್ದು ಟಿ20 ವಿಶ್ವಕಪ್‌ ಮುಡಿಗೇರಿಸಿಕೊಳ್ಳಲಿದೆ. ನಮ್ಮಲ್ಲಿ ಅತ್ಯುತ್ತಮ ಆಟಗಾರರು ಇದ್ದಾರೆ, ಸೂರ್ಯಕುಮಾರ್‌ ಯಾದವ್‌ ತಂಡ ಬಹಳಷ್ಟು ಬಲಿಷ್ಠವಾಗಿದೆ. ಈ ಬಾರಿ ಎದುರಾಳಿಗಳನ್ನು ಕಟ್ಟಿಹಾಕುವುದು ಶತಸಿದ್ಧ, ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕರಾದ ಸುರೇಶ ಗವನ್ನವರ , ಜಿಲ್ಲಾ ಉಪಾಧ್ಯಕ್ಷರಾದ ಗಣೇಶ್ ರೋಖಡೆ, ಮಹಾಂತೇಶ ರಣಗಟ್ಟಿಮಠ, ಹೊಳೆಪ್ಪ ಸುಲದಾಳ ಅಡಿವೆಪ್ಪ ತಳ್ಳೋರಿ, ಸತೀಶ್ ಗುಡದವರ, ಲೋಕೆಶ ರಾಠೋಡ್, ಅರ್ಜುನ ಕಾಂಬಳೆ, ಕಾರ್ತಿಕ್‌ ಪಾಟೀಲ ನಾಗರಾಜ ಲಕ್ಕಪ್ಪಗೊಳ , ಸಂತೋಷ ಚಕ್ರಯಿ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ಮೈಸೂರಿನಲ್ಲಿ ನೂರೊಂದು ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳ ಪ್ರಾರ್ಥನೆ

Mysuru puje

ಮೈಸೂರು: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು, ಮೈಸೂರಿನಲ್ಲಿ ನೂರೊಂದು ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ 101 ತೆಂಗಿನಕಾಯಿ ಒಡೆದು ದೇವರಿಗೆ ಪೂಜೆ ಸಲ್ಲಿಸಲಾಗಿದೆ.

T20 World Cup final: ಮೋದಿ ಫೈನಲ್‌ ಮ್ಯಾಚ್ ನೋಡಲು ಹೋಗದಿದ್ರೆ ಭಾರತ ಗೆಲ್ಲುತ್ತೆ ಎಂದ ಪ್ರಿಯಾಂಕ್‌ ಖರ್ಗೆ

ಗುಡ್​​ ಲಕ್​ ಇಂಡಿಯಾ, ಬ್ಲ್ಯಾಕ್​ ಕ್ಯಾಪ್ಸ್​ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್​​ ಎಂದು ತಮ್ಮ ಮುಖದ ಮೇಲೆ ತ್ರಿವರ್ಣ ಧ್ವಜದ ಬಣ್ಣ ಹಾಕಿಸಿ, ಘೋಷಣೆ ಕೂಗಿದರು. ಈ ವೇಳೆ ಫೈನಲ್​ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಉತ್ತಮ ಪ್ರದರ್ಶನ ನೀಡುವ ಮೂಲಕ ಜಯಗಳಿಸಲಿ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಶುಭ ಕೋರಿದರು.