ಬೆಳಗಾವಿ: ಕೋಚಿಂಗ್ ಸೆಂಟರ್‌ವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ (Physical abuse) ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ (Belagavi News) ಗೋಕಾಕ್‌ನಲ್ಲಿ ನಡೆದಿದೆ. ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಪೋಷಕರು, ಕೋಚಿಂಗ್ ಸೆಂಟರ್ ಎದುರು ಪ್ರತಿಭಟನೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗೋಕಾಕ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಂತ್ರಸ್ತ ಬಾಲಕಿಯರ ಪೋಷಕರು ಆರೋಪಿ ಶಿಕ್ಷಕನ ಬಂಧಿಸಿ ತಮಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ. ತಕ್ಷಣ ಪೊಲೀಸರು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ. ಗೋಕಾಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ಹರಿದ ಕಾರು; ಯುವಕ ಸಾವು
ಚಿತ್ರದುರ್ಗ: ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದು, ಮಹಿಳೆಯ ಕಾಲು ಮುರಿತಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪುಟ್‌ಪಾತ್‌ಗೆ ನುಗ್ಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್ (30) ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಹಿಳೆಗೆ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Sowjanya case: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಕಾರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.