ಬೆಳಗಾವಿ: ಬೆಳಗಾವಿಯಲ್ಲಿ (Belagavi Rains) ಸಂಕ್ರಾಂತಿ ಹಬ್ಬದ ಮುನ್ನಾ ದಿನ ಮಂಗಳವಾರ ಭಾರೀ ಮಳೆಯಾಗಿದೆ. ನಗರದ ಚನ್ನಮ್ಮ ವೃತ್ತ ಸೇರಿ ಹಲವೆಡೆ ಒಂದು ಗಂಟೆಗೂ ಹೆಚ್ಚು ಕಾಲ ಬಿರಸಿನ ವರ್ಷಧಾರೆಯಾದೆ. ಅಕಾಲಿಕ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸವಾರರು ಹೈರಾಣಾದರು.
ಕಾಫಿನಾಡು ಚಿಕ್ಕಮಗಳೂರಲ್ಲೂ ಮಳೆ ಅಬ್ಬರ
ಕಾಫಿನಾಡು ಚಿಕ್ಕಮಗಳೂರಿನಲ್ಲೂ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ ಭಾಗದಲ್ಲಿ ವರುಣ ಅಬ್ಬರಿಸಿದ್ದು, ದಿಢೀರ್ ಸುರಿದ ಮಳೆಯಿಂದ ಜನರು ಹೈರಾಣಾದರು. ಕಳೆದ ಒಂದು ವಾದದಿಂದ ಕೊರೆಯುವ ಚಳಿ, ಶೀತ ಗಾಳಿಗೆ ಜಿಲ್ಲೆಯ ಜನರು ಹೈರಾಣಾಗಿರುವ ನಡುವೆ ಧಾರಾಕಾರವಾಗಿ ಸುರಿದ ಮಳೆ ಕಾಫಿ ಬೆಳೆಗಾರರನ್ನು ಆತಂಕಕ್ಕೆ ದೂಡಿದೆ. ಜಿಲ್ಲೆಯಲ್ಲಿ ಕಾಫಿ ಫಸಲಿನ ಕೊಯ್ಲು ನಡೆಯುತ್ತಿದ್ದು, ಒಣ ಹಾಕಿದ ಕಾಫಿ, ಮಳೆಯಿಂದ ಸಂಪೂರ್ಣ ನೆನೆದು ಹಾಳಾಗಿದೆ. ಕೆಲವೆಡೆ ಬೆಳೆ ನೀರಲ್ಲಿ ಕೊಚ್ಚಿ ಹೋಗಿದೆ. ಹೀಗಾಗಿ ರೈತರು ಸಂಕಷ್ಟ ಎದುರಿಸುವಂತಾಗಿದೆ.
ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗುವುದಿಲ್ಲ, ನಂತರ ಕ್ರಮೇಣ 2-3 ಡಿಗ್ರಿ ಸೆ. ಇಳಿಯುತ್ತದೆ. ಮುಂದಿನ 5 ದಿನಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
Health Tips: ಚಳಿಗಾಲವೆಂದರೆ ಸ್ವಪೋಷಣೆಯ ಕಾಲ! ಹೇಗೆ?
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 17°C ಇರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.