ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Belagavi Accident: ಹುಕ್ಕೇರಿಯಲ್ಲಿ ದುರ್ಗಾ ಮಾತೆ ಮೆರವಣಿಗೆ ವೇಳೆ ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿಯಾಗಿ ಮೂವರ ಸಾವು

Hukkeri Accident: ದುರ್ಗಾದೇವಿ ಮೂರ್ತಿಯನ್ನು ಬೆಳಗಾವಿಯಿಂದ ಹುಕ್ಕೇರಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮಕ್ಕೆ ಟ್ರ್ಯಾಕ್ಟ‌ರ್‌ನಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಯಮಕನಮರಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಳಗಾವಿ: ನವರಾತ್ರಿ ಸಂಭ್ರಮದ ಮೊದಲ ದಿನವಾದ ಭಾನುವಾರ ಜಿಲ್ಲೆಯಲ್ಲಿ (Belagavi accident) ಭೀಕರ ಅಪಘಾತ ನಡೆದಿದೆ. ದುರ್ಗಾ ಮಾತಾ ದೌಡ ದೇವಿ ಮೆರವಣಿಗೆ ವೇಳೆ ಸಂಭವಿಸಿದ ಅಪಘಾತದಲ್ಲಿ ಮೂವರು ಭಕ್ತರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ನಡೆದಿದೆ.

ದುರ್ಗಾದೇವಿ ಮೂರ್ತಿಯನ್ನು ಬೆಳಗಾವಿಯಿಂದ ಹುಕ್ಕೇರಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮಕ್ಕೆ ಟ್ರ್ಯಾಕ್ಟ‌ರ್‌ನಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳು ಪ್ರಕಾಶ, ಮಹೇಶ್ ಹಾಗೂ ದಾನೇಶ್ವರಿ ಎಂದು ತಿಳಿದುಬಂದಿದೆ.

ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳಿಗೆ ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇವಿಯ ಮೆರವಣಿಗೆಯ ಸಂದರ್ಭದಲ್ಲಿ ಸಂಭವಿಸಿದ ಈ ದುರಂತದಿಂದ ಭಕ್ತರು ಹಾಗೂ ಸ್ಥಳೀಯರಲ್ಲಿ ದುಃಖದ ಛಾಯೆ ಆವರಿಸಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕೇವಲ 600 ರೂ. ವಿಚಾರಕ್ಕೆ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ

ಬೆಂಗಳೂರು: ಕೇವಲ 600 ರೂ. ವಿಚಾರಕ್ಕೆ ಆರಂಭವಾದ ಜಗಳ ಯುವಕನೊಬ್ಬನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾಪೀಠ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ಮಂಜು ಅಲಿಯಾಸ್ ಕೋಳಿ ಮಂಜು ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಳನಿ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಮಂಜು, ಪಳನಿ ಬಳಿ ತನ್ನ ಮೊಬೈಲ್ ಅಡವಿಟ್ಟು ಮದ್ಯ ಸೇವನೆಗಾಗಿ ಹಣ ಪಡೆದಿದ್ದ ಎನ್ನಲಾಗಿದೆ. ಈ ಹಣವನ್ನು ಮರಳಿ ನೀಡುವ ವಿಚಾರವಾಗಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಶನಿವಾರ ತಡರಾತ್ರಿ ಬಾರ್ ಬಳಿ ಆರಂಭವಾದ ಮಾತಿನ ಚಕಮಕಿ ಬಳಿಕ ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಹಣದ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ತೀವ್ರಗೊಂಡಾಗ ಪಳನಿ ದೊಣ್ಣೆಯಿಂದ ಮಂಜು ತಲೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಂಜು ಮೃತಪಟ್ಟಿದ್ದಾನೆ. ಸಣ್ಣ ಮೊತ್ತದ ಹಣದ ವಿಚಾರಕ್ಕೆ ನಡೆದ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Tiptur News: ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯ ಶವ ಪತ್ತೆ

ಘಟನೆ ತಿಳಿಯುತ್ತಿದ್ದಂತೆ ಸಿ.ಕೆ. ಅಚ್ಚುಕಟ್ಟು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಂಧಿತ ಆರೋಪಿ ಪಳನಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.