ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಳಗಾವಿಯಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಸಾವು

Belagavi accident: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಜಮಖಂಡಿ-ಮೀರಜ್‌ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ, ಮೂವರು ಮೃತಪಟ್ಟಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ಲಾರಿ-ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಸಾವು

ಸಾಂದರ್ಭಿಕ ಚಿತ್ರ -

Prabhakara R
Prabhakara R Feb 18, 2026 5:48 PM

ಚಿಕ್ಕೋಡಿ: ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬೆಳಗಾವಿ (Belagavi accident) ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಪತಿ ಗಿರೆಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ ಮಗಳು ಆರಾಧ್ಯಾ (7) ಮೃತ ದುರ್ದೈವಿಗಳು.

ಮೃತ ಗಿರೆಪ್ಪಾ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿಗೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ್‌ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಮತ್ತು ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓವರ್ ಟೆಕ್ ಮಾಡುವ ಭರದಲ್ಲಿ ಲಾರಿ ಚಕ್ರಕ್ಕೆ ಬೈಕ್‌ ಸಿಲುಕಿ ಇಬ್ಬರು ಸಾವು

ಕೊಪ್ಪಳ: ಓವರ್ ಟೆಕ್ ಮಾಡುವ ವೇಳೆ ಲಾರಿ ಚಕ್ರಕ್ಕೆ ಬೈಕ್‌ ಸಿಲುಕಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಎಂಬ ಗ್ರಾಮದಲ್ಲಿ ನಡೆದಿದೆ.

ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬೆಂಗಾವಲು ವಾಹನ ಅಪಘಾತ

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ನಿವಾಸಿಗಳಾದ ಶ್ರೀನಿವಾಸ್ (26) ಹಾಗೂ ಸಿದ್ದನಗೌಡ (25) ಮೃತ ಸವಾರರು ಎಂದು ತಿಳಿದುಬಂದಿದೆ. ಸಂಬಂಧಿಕರೊಬ್ಬರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಶ್ರೀನಿವಾಸ್ ಸ್ನೇಹಿತನ ಜತೆಗೆ ತೆರಳುತ್ತಿದ್ದರು. ಮುಸಲಾಪುರದಿಂದ ಬೈಕ್‌ನಲ್ಲಿ ಹಿರೇ ಅರಳಹಳ್ಳಿಗೆ ಇಬ್ಬರು ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಲಾರಿ ಕೆಳಗಡೆ ಸಿಲುಕಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತು ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.