ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ಕಾರ್ಮಿಕರ ಸಾವು, 6 ಮಂದಿಗೆ ಗಾಯ

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಅವಘಡದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರ ಸಾವು

ಬಾಯ್ಲರ್‌ ಸ್ಫೋಟವಾದ ಬೆಳಗಾವಿಯ ಮರಕುಂಬಿಯಲ್ಲಿನ ಇನಾಮದಾರ್ ಸಕ್ಕರೆ ಕಾರ್ಖಾನೆ. -

Prabhakara R
Prabhakara R Jan 7, 2026 4:37 PM

ಬೆಳಗಾವಿ: ಜಿಲ್ಲೆಯಲ್ಲಿ ಘೋರ ದುರಂತ ಒಂದು ಸಂಭವಿಸಿದೆ. ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟು, ಆರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮರಕುಂಬಿಯ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 6 ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಬೆಳಗಾವಿ ಎಸ್‌ಪಿ ಕೆ ರಾಮರಾಜನ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ; ನಾಲ್ವರು ಆರೋಪಿಗಳ ಅರೆಸ್ಟ್‌

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೃಣಾಲ್‌ ಹೆಬ್ಬಾಳ್ಕರ್‌ ಅವರ ಕಾರು ಚಾಲಕ ಬಸವಂತ ಕಡೋಲ್ಕರ್‌ಗೆ ಮಂಗಳವಾರ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ನಡೆದಿತ್ತು. ಪ್ರಕರಣ ಸಂಬಂಧ ಶಿವಯ್ಯ ಪೂಜಾರಿ, ನಿತೇಶ್‌ ಬಡಿಗೇರ, ಮೌನಪ್ಪ, ಸಂಪತ್‌ ಎಂಬವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಚಾಕು ಇರಿತಕ್ಕೊಳಗಾದ ಬಸವಂತ ಸ್ನೇಹಿತ ಮದನ ಕ್ಯಾಂಪ್‌ ಠಾಣೆಯಲ್ಲಿ ದೂರು ನೀಡಿದ್ದರು. ದೂರನ್ನು ಆಧರಿಸಿ, ಎಸಿಪಿ ಖಡೇಬಜಾರ್‌ ಶೇರಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಮದುವೆಗೆ ನಿರಾಕರಣೆ; ಬೆಂಗಳೂರಿನಲ್ಲಿ ಪ್ರಿಯಕರನ ಮನೆಯಲ್ಲೇ ಯುವತಿ ಆತ್ಮಹತ್ಯೆ

ಆರೋಪಿಗಳನ್ನ‌ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. ಹಲ್ಲೆಗೆ ನಿಖರ ಕಾರಣ ಏನು ಎಂಬುವುದು ತನಿಖೆಯಿಂದ ಗೊತ್ತಾಗಲಿದೆ ಎಂದ ಬೆಳಗಾವಿ ಪೊಲೀಸ್ ಕಮಿಷನರ್‌ ಭೂಷಣ್‌ ಬೊರಸೆ ತಿಳಿಸಿದ್ದಾರೆ.