ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bellary Firing: ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆ ಎಫ್‌ಐಆರ್

ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಸಂಬಂಧ ಬಳ್ಳಾರಿಯ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಳ್ಳಾರಿಯಲ್ಲಿ ಗಲಭೆ

ಬಳ್ಳಾರಿ‌, ಜ.2: ವಾಲ್ಮೀಕಿ ಬ್ಯಾನರ್ (Valmiki banner) ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಪ್ರಕರಣ ಸಂಬಂಧ ಶಾಸಕ ಜನಾರ್ದನ ರೆಡ್ಡಿ (Janardhan Reddy), ಮಾಜಿ ಸಚಿವ ಶ್ರೀರಾಮುಲು (Sriramulu) ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಎಂಬವರು ಮೃತಪಟ್ಟಿದ್ದರು. ಪ್ರಕರಣದಲ್ಲಿ ಜನಾರ್ದನ ರೆಡ್ಡಿಯನ್ನು ಎ1 , ಸೋಮಶೇಖರ್ ರೆಡ್ಡಿಯನ್ನು ಎ2, ಶ್ರೀರಾಮುಲುವನ್ನು ಎ3 ಆಗಿಸಲಾಗಿದೆ.

ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಸಂಬಂಧ ಬಳ್ಳಾರಿಯ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಗುರುವಾರ (ಜ.1) ಒಂದು ಗುಂಪು ಮುಂದಾಗಿತ್ತು. ಈ ವೇಳೆ ಗಲಾಟೆ ಪ್ರಾರಂಭವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದರು. ಉದ್ವಿಗ್ನ ವಾತಾವರಣ ನಿರ್ಮಾಣವಾದ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಬಂದಿದ್ದಾರೆ. ಈ ಸಂದರ್ಭದಲ್ಲಿ ಎರಡು ಕಡೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿ, ಜನರನ್ನು ಚದುರಿಸಿದ್ದಾರೆ.

ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಮಧ್ಯೆ ಗಲಾಟೆ; ಓರ್ವ ಸಾವು

ಪೊಲೀಸರು ಲಾಠಿ ಚಾರ್ಜ್ ಮಾಡಿದರೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಈವರೆಗೂ ಕಾಂಗ್ರೆಸ್ ಕಾರ್ಯಕರ್ತನಿಗೆ ಗುಂಡಿನ ಹಾರಿಸಿದರು ಯಾರು ಎನ್ನುವುದು ತಿಳಿದು ಬಂದಿಲ್ಲ. ಇನ್ನೂ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿಗೆ ಗಂಭೀರ ಗಾಯವಾಗಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಗಲಾಟೆ ವಿಕೋಪದ ಬಳಿಕ ಪೊಲೀಸರು ರೆಡ್ಡಿ ಮನೆಯ ಬಳಿ 200 ಮೀಟರ್‌ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಈ ಸಂಬಂಧ ನಾರಾ ಭರತ್ ರೆಡ್ಡಿ ಪ್ರತಿಕ್ರಿಯಿಸಿ, ಜನಾರ್ದನ ರೆಡ್ಡಿ ಬೆಂಬಲಿಗರ ಮಾಡಿದ ಗಲಾಟೆಯಲ್ಲಿ ನಮ್ಮ ಕಾರ್ಯಕರ್ತ ಮೃತಪಟ್ಟಿದ್ದಾರೆ. ಹೀಗಾಗಿ ಜನಾರ್ದನ ರೆಡ್ಡಿ ಮತ್ತು ಬೆಂಬಲಿಗರನ್ನು ಕೂಡಲೇ ಬಂಧಿಸಬೇಕು. ವಾಲ್ಮೀಕಿ ಕಾರ್ಯಕ್ರಮವನ್ನು ತಡೆಯಲು ಕಳೆದ 1 ತಿಂಗಳಿನಿಂದ ಇವರು ಬಹಳ ಪ್ರಯತ್ನ ಪಡುತ್ತಿದ್ದರು. ಈಗ ಗಲಾಟೆ ಮಾಡುವ ಮೂಲಕ ಕಾರ್ಯಕ್ರಮ ನಿಲ್ಲಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಶ್ರೀರಾಮುಲು ಪ್ರತಿಕ್ರಿಯಿಸಿ, ಗುಂಡಿನ ದಾಳಿಯನ್ನು ನಾವು ಯಾರೂ ಮಾಡಿಲ್ಲ. ಜನಾರ್ದನ ರೆಡ್ಡಿ ಮತ್ತು ನನಗೆ ಸರ್ಕಾರವೇ ಗನ್ ಮ್ಯಾನ್ ನೀಡಿದೆ. ಅವರು ಯಾರೂ ಫೈರ್ ಮಾಡಿಲ್ಲ. ಇಂದು ತಂತ್ರಜ್ಞಾನದ ಮೂಲಕ ಯಾವ ಗನ್‌ನಿಂದ ಬುಲೆಟ್ ಹಾರಿದೆ ಎನ್ನುವುದು ಗೊತ್ತಾಗುತ್ತದೆ. ಆ ಬುಲೆಟ್ ಅನ್ನು ವಿಧಿವಿಜ್ಞಾನ ಲ್ಯಾಬ್‌ಗೆ ಕಳುಹಿಸಿ ಕಂಡುಹಿಡಿಯಲಿ. ನಮ್ಮ ಕಡೆಯಿಂದ ಯಾರು ಫೈರ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ನೀವು ರಸ್ತೆಯಲ್ಲಿ ಎಲ್ಲಿ ಬೇಕಾದರೂ ಕಟ್ಟಿಕೊಳ್ಳಿ. ಆದರೆ ನಮ್ಮ ಮನೆಯ ಮುಂದೆ ಬ್ಯಾನರ್ ಕಟ್ಟಿದರೆ ಸಂಚಾರಕ್ಕೆ ಸಮಸ್ಯೆ ಆಗುತ್ತದೆ ಎಂದು ನಾವು ಮೊದಲೇ ಅವರಿಗೆ ಹೇಳಿದ್ದೆವು. ಆದರೆ ಅದನ್ನು ಮೀರಿ ಅವರು ನಮ್ಮ ಮನೆಯ ಮುಂದೆಯೇ ಕಟ್ಟಿದ್ದಾರೆ. ನಾವು ರಾಜಕಾರಣ ಮಾಡುತ್ತೇವೆ. ಆದರೆ ನಮ್ಮ ವಿರೋಧಿ ಪಕ್ಷದವರ ಮನೆಯ ಮುಂದೆ ಹೋಗಿ ಗಲಾಟೆ ಮಾಡುವುದಿಲ್ಲ. ಆದರೆ ಅವರು ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟಿದ್ದಾರೆ ಅಷ್ಟೇ ಅಲ್ಲದೇ ಕುರ್ಚಿ ಹಾಕಿಕೊಂಡು ಕುಳಿತು ರೌಡಿಗಳ ರೀತಿ ವರ್ತನೆ ಮಾಡಿದ್ದಾರೆ ಎಂದು ದೂರಿದರು.

ಹರೀಶ್‌ ಕೇರ

View all posts by this author