ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Karaga: ಬೆಂಗಳೂರು ಕರಗ ಏ.4ರಿಂದ 14ರವರೆಗೆ, 20 ಲಕ್ಷ ಜನರ ನಿರೀಕ್ಷೆ

ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದ್ದು, ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ಸಲ 15ನೇ ಬಾರಿಗೆ ಕರಗ ಹೊರಲಿದ್ದಾರೆ.

ಬೆಂಗಳೂರು ಕರಗ ಏ.4ರಿಂದ 14ರವರೆಗೆ, 20 ಲಕ್ಷ ಜನರ ನಿರೀಕ್ಷೆ

ಸಂಗ್ರಹ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 10, 2025 9:32 AM

ಬೆಂಗಳೂರು: ಏಪ್ರಿಲ್‌ 4ರಿಂದ ಏಪ್ರಿಲ್‌ 14ರವರೆಗೆ ಬೆಂಗಳೂರಿನ (Bengaluru News) ಐತಿಹಾಸಿಕ ಕರಗ (Bengaluru Karaga) ಮಹೋತ್ಸವ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ (A Jnanendra) ಕರಗವನ್ನು ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ಸಲ 15ನೇ ಬಾರಿಗೆ ಕರಗ ಹೊರಲಿದ್ದಾರೆ.

ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದ್ದು, ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ.

ಏ.9ರಂದು ಆರತಿ ದೀಪಗಳು, ಏ.10ರ ಗುರುವಾರ ಹಸೀ ಕರಗ, ಏ.11ರಂದು ಹೊಂಗಲು ಸೇವೆ, ಏ.12ರ ಶನಿವಾರದಂದು ಕರಗ ಶಕ್ತ್ಯೋತ್ಸವ ಹಾಗೂ ಧರ್ಮರಾಯಸ್ವಾಮಿ ರಥೋತ್ಸವ, ಏ.13ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ ಮತ್ತು ಏ.14ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ನೆರವೇರಲಿದೆ.

ಬೆಂಗಳೂರಿನ ಧರ್ಮರಾಯನ ದೇವಸ್ಥಾನ ಕರಗ ಮಹೋತ್ಸವದ ಕೇಂದ್ರ. ಬೆಂಗಳೂರು ಕರಗ ಒಂಬತ್ತು ದಿನಗಳ ಸಮಾರಂಭ. ಹೊಸವರ್ಷದ ಯುಗಾದಿ ಹಬ್ಬದ ಆನಂತರ ಸಪ್ತಮಿ ಅಥವಾ ಅಷ್ಟಮಿಯಂದು ದ್ವಜಾರೋಹಣದಿಂದ ಆರಂಭವಾಗಿ ಬಿದಿಗೆಯಂದಿನ ಧ್ವಜಾರೋಹಣದವರೆಗೆ ವಿವಿಧ ಕಾರ್ಯಕ್ರಮವಿರುತ್ತವೆ. ಇವುಗಳಲ್ಲಿ ದ್ವಾದಶಿಯಂದು ನಡೆಯುವ ಸಮುದಾಯದ ಆರತಿ, ತ್ರಯೋದಶಿಯಂದು ಹಸೀಕರಗದ ರಚನೆ ಮತ್ತು ಸ್ಥಾಪನೆ, ಚತುರ್ದಶಿಯಂದು ಪೊಂಗಲುಸೇವೆ ಮತ್ತು ಪೂರ್ಣಿಮೆಯಂದು ನಡೆಯುವ ಕರಗದ ಉತ್ಸವ ಪ್ರಮುಖ ಕಾರ್ಯಕ್ರಮಗಳಾಗಿವೆ.

ಇದನ್ನೂ ಓದಿ: Bengaluru Karaga 2025: ವಿಶ್ವ ವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಡೇಟ್‌ ಫಿಕ್ಸ್‌