Karnataka Weather: ಬೆಂಗಳೂರು, ಕೋಲಾರ ಸೇರಿ ಹಲವು ಜಿಲ್ಲೆಗಳಿಗೆ ಮಾ.22ರಿಂದ ಮಳೆ ಮುನ್ಸೂಚನೆ
Karnataka Weather: ಕಲಬುರಗಿಯಲ್ಲಿ ರಾಜ್ಯದಲ್ಲೇ ಗರಿಷ್ಠ ತಾಪಮಾನ 40.6 ಡಿ.ಸೆ ದಾಖಲಾಗಿದ್ದು, ಚಾಮರಾಜನಗರದಲ್ಲಿ ಕನಿಷ್ಠ ತಾಪಮಾನ 20.1 ಡಿ.ಸೆ. ದಾಖಲಾಗಿದೆ. ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.


ಬೆಂಗಳೂರು: ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಗಳವಾರ ಮಳೆಯಾಗಿದ್ದು, ಉಳಿದೆಡೆ ಒಣ ಹವೆ (Karnataka Weather) ಇತ್ತು. ಇನ್ನು ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮಾ.20ರಂದು ಕರ್ನಾಟಕದ ಒಳನಾಡಿನಲ್ಲಿ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಉಳಿದೆಡೆ ಒಣ ಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಇರುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 21ರಂದು ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿಮೀ ವೇಗದ ಗಾಳಿಯು ಮೇಲುಗೈ ಸಾಧಿಸುವ ಸಾಧ್ಯತೆಯಿದ್ದು, ಉಳಿದೆಡೆ ರಾಜ್ಯದಲ್ಲಿ ಒಣ ಹವೆ ಇರಲಿದೆ.
ಮಾ.22ರಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ಮಾ. 23ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಯಾದಗಿರಿ, ವಿಜಯಪುರ, ಕೊಪ್ಪಳ, ಗದಗ ಮತ್ತು ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಮಾ.24ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Sunita Williams: ಹ್ಯಾಟ್ಸ್ ಆಫ್ ಟು ಯೂ ಸುನಿತಾ- ಗಗನತಾರೆಯ ಬಗ್ಗೆ ಇಲ್ಲಿದೆ ರೋಚಕ ಸಂಗತಿ!
ಮಾ.25ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.