ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tushar Girinath: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ವರ್ಗಾವಣೆ; ಹೊಸ ಆಯುಕ್ತ ನೇಮಕ

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇವರ ಸ್ಥಾನಕ್ಕೆ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಂತ ಮಹೇಶ್ವರ ರಾವ್. ಎಂ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ವರ್ಗಾವಣೆ

Profile Vishakha Bhat Apr 29, 2025 11:23 AM

ಬೆಂಗಳೂರು: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇವರ ಸ್ಥಾನಕ್ಕೆ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಂತ ಮಹೇಶ್ವರ ರಾವ್. ಎಂ ಅವರನ್ನು ನೇಮಕ ಮಾಡಲಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಿಂದೆ ಎಂ.ಮಹೇಶ್ವರ್‌ ರಾವ್‌ ಅವರು BMRCL ಎಂಡಿ ಆಗಿದ್ದರು. ಇದೀಗ ಪಾಲಿಕೆ ಮುಖ್ಯ ಆಯುಕ್ತರಾಗಿ ಎಂದು ಜವಾಬ್ದಾರಿ ನೀಡಲಾಗಿದೆ.

ತುಷಾರ್ ಗಿರಿ ನಾಥ್, ಐಎಎಸ್ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಬೆಂಗಳೂರು ಆಗಿ ವರ್ಗಾವಣೆ ಮಾಡಲಾಗಿದೆ. 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಎರಡು ತಿಂಗಳು ಬಿಬಿಎಂಪಿಯ ಆಯುಕ್ತರಾಗಿ ಎಂ.ಮಹೇಶ್ವರ್‌ ರಾವ್‌ ಕಾರ್ಯನಿರ್ವಹಿಸಿದ್ದರು. ಇದೀಗ ಪಾಲಿಕೆ ಮುಖ್ಯ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Judges Transfer: ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಾಧೀಶರ ವರ್ಗಾವಣೆ

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಎಸ್.ಆರ್.ಉಮಾಶಂಕರ್‌ ಏ.30ಕ್ಕೆ ನಿವೃತ್ತಿಯಾಗುತ್ತಿದ್ದು, ಆ ಹುದ್ದೆಗೆ ತುಷಾರ್‌ ಗಿರಿನಾಥ್‌ ನೇಮಕ ಮಾಡಲಾಗಿದೆ. ಜತೆಗೆ ಬಿಬಿಎಂಪಿಯ ಆಡಳಿತಾಧಿಕಾರಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ತುಷಾರ್‌ ಗಿರಿನಾಥ್‌ ಅವರಿಗೆ ವಹಿಸಲಾಗಿದೆ.