ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ದತ್ತಾ ಸರಾಫ್ ನೇಮಕ

Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಸಂಘಟನೆಯ ವಿಸ್ತರಣೆ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ದತ್ತಾ ಸರಾಫ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ ಎಂದು ಸಂಘ ತಿಳಿಸಿದೆ.

ಬ್ರಾಹ್ಮಣ ಮಹಾಸಂಘದ ಬೆಂ. ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ನೇಮಕವಾದ ದತ್ತಾ ಸರಾಫ್.

ಬೆಂಗಳೂರು, ಫೆ.10: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಸಂಘಟನೆಯ ವಿಸ್ತರಣೆ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bengaluru News) ಜಿಲ್ಲಾಧ್ಯಕ್ಷರಾಗಿ ದತ್ತಾ ಸರಾಫ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಬ್ರಾಹ್ಮಣ ಸಮಾಜದ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಉನ್ನತಿಗೆ ನಿರಂತರವಾಗಿ ಶ್ರಮಿಸುತ್ತಿರುವ ದತ್ತಾ ಸರಾಫ್ ಅವರ ಸೇವಾ ಮನೋಭಾವ, ಸಂಘಟನಾ ಸಾಮರ್ಥ್ಯ ಮತ್ತು ನಾಯಕತ್ವ ಗುಣಗಳನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ಅವರ ನೇಮಕದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಸಂಘದ ಚಟುವಟಿಕೆಗಳಿಗೆ ಇನ್ನಷ್ಟು ಬಲ ದೊರೆಯಲಿದೆ ಎಂಬ ವಿಶ್ವಾಸವನ್ನು ಸಂಘದ ರಾಜ್ಯ ನಾಯಕತ್ವ ವ್ಯಕ್ತಪಡಿಸಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯಾಧ್ಯಕ್ಷ ಜಿ. ಆರ್. ಪ್ರದೀಪ್, ʼಸಂಘದ ಬಲವು ಶಿಸ್ತಿನ ಸಂಘಟನೆ ಮತ್ತು ನಿಷ್ಠಾವಂತ ನಾಯಕತ್ವದಲ್ಲಿದೆ. ದತ್ತಾ ಸರಾಫ್ ಅವರ ನೇಮಕದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆʼ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯಾಧ್ಯಕ್ಷ ಜಿ. ಆರ್. ಪ್ರದೀಪ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ, ಉದ್ಯಮ ವಿಭಾಗದ ರಾಜ್ಯಾಧ್ಯಕ್ಷ ಶ್ರೀಧರ್, ಯುವ ವಿಭಾಗದ ರಾಜ್ಯಾಧ್ಯಕ್ಷ ಕಾರ್ತಿಕ್ ಸೋಮಯಾಜಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಅಧ್ಯಕ್ಷೆ ರೀಮಾ, ಹಾಗೂ ಶುಭಾ ಅವರು ಉಪಸ್ಥಿತರಿದ್ದರು.‌

Bengaluru Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್‌ ವ್ಯತ್ಯಯ

ಈ ನೇಮಕ ಕಾರ್ಯಕ್ರಮವು ಸಂಘದ ಪದಾಧಿಕಾರಿಗಳು, ಸಮಾಜದ ಗಣ್ಯರು ಹಾಗೂ ಕಾರ್ಯಕರ್ತರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿತು.