ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shivagange Hill: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ತೆರಳಿದ್ದ ಉದ್ಯಮಿಯ ಮಗ ನಾಪತ್ತೆ; ಪೊಲೀಸರಿಂದ ಶೋಧಕಾರ್ಯ

Techie missing in Shivagange Hill: ಶಿವಗಂಗೆ ಬೆಟ್ಟದ ಕೆಳಗೆ ಯುವ ಟೆಕ್ಕಿಯ ಬುಲೆಟ್ ಬೈಕ್ ಪಾರ್ಕ್ ಮಾಡಲಾಗಿದ್ದು, ಅವರ ಮೊಬೈಲ್ ಬೇರೊಂದು ಕಡೆ ಸ್ವಿಚ್ ಆಫ್ ಆಗಿದೆ. ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಸದ್ಯ ಪೊಲೀಸರು ಯುವಕನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ತೆರಳಿದ್ದ ಉದ್ಯಮಿಯ ಮಗ ನಾಪತ್ತೆ!

-

Prabhakara R
Prabhakara R Aug 8, 2026 7:48 PM

ನೆಲಮಂಗಲ: ಪ್ರಸಿದ್ಧ ಪ್ರವಾಸಿ ತಾಣ ಶಿವಗಂಗೆ ಬೆಟ್ಟಕ್ಕೆ (Shivagange Hill) ಟ್ರೆಕ್ಕಿಂಗ್‌ಗೆ ತೆರಳಿದ್ದ ಉದ್ಯಮಿಯ ಮಗ, ಟೆಕ್ಕಿ (Techie missing) ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 31 ವರ್ಷದ ಯುವಕ ಪ್ರತೀಕ್ ಉಪಧ್ಯಾಯ ನಾಪತ್ತೆಯಾಗಿದ್ದು, ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ. ಬೆಟ್ಟದ ಕೆಳಗೆ ಬುಲೆಟ್ ಬೈಕ್ ಪಾರ್ಕ್ ಮಾಡಲಾಗಿದ್ದು, ಅವರ ಮೊಬೈಲ್ ಬೇರೊಂದು ಕಡೆ ಸ್ವಿಚ್ ಆಫ್ ಆಗಿದೆ. ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಸದ್ಯ ಈ ಬಗ್ಗೆ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ದಕ್ಷಿಣಕಾಶಿ ಎಂದೇ ಪ್ರಸಿದ್ಧವಾದ ಶಿವಗಂಗೆ ಬೆಟ್ಟದ ಕೆಳಗೆ ಬುಲೆಟ್ ಬೈಕ್ ಪಾರ್ಕ್ ಮಾಡಿ ಬೆಟ್ಟ ಏರಿರುವ ಪ್ರತೀಕ್ ಕಾಣೆಯಾಗಿದ್ದಾರೆ. ಐದು ದಿನಗಳ ಹಿಂದೆ ನಾಪತ್ತೆಯಾಗಿರುವ ಪ್ರತೀಕ್ ಉಪಧ್ಯಾಯ ಅವರು, ವೈಟ್‌ಫೀಲ್ಡ್‌ನಲ್ಲಿ ಬುಲೆಟ್ ಬೈಕ್ ಬಾಡಿಗೆ ಪಡೆದಿದ್ದರು ಎಂದು ತಿಳಿದುಬಂದಿದೆ.

ಪ್ರತೀಕ್‌ ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಬಂದಿದ್ದರು. ನಿನ್ನೆ ಬೆಳಗ್ಗೆ ಬೆಟ್ಟ ಹತ್ತಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಮತ್ತೆ ವಾಪಸ್ ಆಗಿದ್ದಾರಾ ಇಲ್ಲವೇ ಎಂಬ ಶಂಕೆ ವ್ಯಕ್ತವಾಗಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರತೀಕ್ ನಾಪತ್ತೆ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆ ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್‌ನಲ್ಲಿ ಪೊಲೀಸರ ಶೋಧ ಕಾರ್ಯ ನಡೆಸಿದ್ದಾರೆ.

ಡ್ರೋನ್ ಕ್ಯಾಮೆರಾ ಹಾರಿಸಿ ಬೆಟ್ಟದ ಮೂಲೆ ಮೂಲೆಯನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಮುದ್ರದ ಮಟ್ಟದಿಂದ ಸುಮಾರು 4800 ಅಡಿ ಎತ್ತರದಲ್ಲಿ ಶಿವಗಂಗೆ ಬೆಟ್ಟ ಇದ್ದು, ನೆಲಮಂಗಲ ಹಾಗೂ ದಾಬಸ್‌ಪೇಟೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗುತ್ತೀನಿ ಎಂದು ಮನೆಯಲ್ಲಿ ಹೇಳಿ ಹೋಗಿದ್ದ ಪ್ರತೀಕ್ ನಾಪತ್ತೆಯಾಗಿದ್ದು, ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ.

Chikkamagaluru Car Accident: ಧರ್ಮಸ್ಥಳಕ್ಕೆ ತೆರಳುತ್ತಿದ್ದವರ ಕಾರು ಭೀಕರ ಅಪಘಾತ; ಮೂವರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

ನಿನ್ನೆ ಮಧ್ಯಾಹ್ನವೇ ಪ್ರತೀಕ್ ಫೋನ್ ಸ್ವಿಚ್ ಆಫ್ ಆಗಿದ್ದು, ಈ ಹಿನ್ನೆಲೆ ಸಂಜೆ ವೇಳೆಗೆ ಪೊಲೀಸರಿಗೆ ಕುಟುಂಬಸ್ಥರು ದೂರು ನೀಡಿದ್ದಾರೆ. ಸದ್ಯ ಕಾಡುಗೋಡಿ ಪೊಲೀಸರು ಸಹ ದಾಬಸ್‌ಪೇಟೆ ಪೊಲೀಸರ ಜೊತೆ ಪ್ರತೀಕ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ ಎನ್ನಲಾಗಿದೆ.