ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ; 10 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

Cylinder Blast: ಬೊಮ್ಮಸಂದ್ರದಲ್ಲಿ ಇಂದು ಮುಂಜಾನೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬುವರಿಗೆ ಸೇರಿದ ಪಿಜಿಯಲ್ಲಿ (PG) ಈ ಅವಘಡ ನಡೆದಿದೆ.

ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ; 10 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 23, 2026 11:30 AM

ಬೆಂಗಳೂರು: ನಗರದ ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಇಂದು ಮುಂಜಾನೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬುವರಿಗೆ ಸೇರಿದ ಪಿಜಿಯಲ್ಲಿ (PG) ಈ ಅವಘಡ ನಡೆದಿದೆ. ಈ ಪಿಜಿಯನ್ನು (Cylinder blast) ನಾಗರಾಜ್ ರೆಡ್ಡಿ ಅವರು ಬೇರೆಯವರಿಗೆ ಲೀಸ್ ನೀಡಿದ್ದರು ಎನ್ನಲಾಗಿದೆ. ಇಂದು ಮುಂಜಾನೆ ಸುಮಾರು 6 ಗಂಟೆಯ ಸುಮಾರಿಗೆ ಕಾರ್ಮಿಕರು ಎದ್ದೇಳುವ ಸಮಯದಲ್ಲಿ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಪಿಜಿಯಲ್ಲಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.

ಪಿಜಿಯಲ್ಲಿ ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕೆಲಸಕ್ಕಾಗಿ ಬಂದಿದ್ದ 10ಕ್ಕೂ ಹೆಚ್ಚು ಕಾರ್ಮಿಕರು ವಾಸವಾಗಿದ್ದರು. ಗಾಯಗೊಂಡವರೆಲ್ಲರೂ ಹೊರರಾಜ್ಯದವರಾಗಿದ್ದು, ಎಲ್ಲರಿಗೂ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿವೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಕ್ತಪಿಯಲ್ಲಿ ನಡೆದಿದ್ದು ಪೊಲೀಸರು ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬೊಮ್ಮಸಂದ್ರದಲ್ಲಿರುವ ನಾಗರಾಜ್ ರೆಡ್ಡಿ ಎಂಬುವರಿಗೆ ಸೇರಿದ ಈ PG ಕಟ್ಟಡದಲ್ಲಿ ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಸಿಲಿಂಡ‌ರ್ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಕಟ್ಟಡದ ಭಾಗಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಗುಜರಾತ್‌ನ ಮೆಹಮದಪುರದಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ರಾಮೋಲ್ ಪ್ರದೇಶದ ಆರ್‌ಎಎಫ್ ಶಿಬಿರದ ಹಿಂದಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಹತ್ತಿರದ ವಸ್ತ್ರಲ್ ಆರ್‌ಎಎಫ್ ಶಿಬಿರದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ನೀಟ್‌ ಪರೀಕ್ಷಾ ಅಕ್ರಮ ಆಧರಿಸಿ ಜೀ5ನಲ್ಲಿ ಹೊಸ ವೆಬ್‌ ಸರಣಿ: ಸಂಚಲನ ಮೂಡಿಸಿದ 'ದಿ ಸ್ಕ್ಯಾಮ್: ಲೀಕ್ಡ್' ಟೀಸರ್‌!

ಅಹಮದಾಬಾದ್ ಮಹಾನಗರ ಪಾಲಿಕೆ ಅಧಿಕಾರಿಗಳು, ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ತಂಡಗಳು ಕೂಡ ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು. ಆರ್‌ಎಎಫ್ ಶಿಬಿರದ ಹಿಂದೆ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು. ಕಾರ್ಖಾನೆಯನ್ನು ಮೆಹುಲ್ ದೋಡಿಯಾ ಎಂಬ ವ್ಯಕ್ತಿ ನಡೆಸುತ್ತಿದ್ದು, ಅವರ ಪರವಾನಗಿಯನ್ನು ಈ ಹಿಂದೆ ರದ್ದುಗೊಳಿಸಲಾಗಿತ್ತು.