Anekal News: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿದ ಕಾಮುಕ ರೇಡಿಯಾಲಜಿಸ್ಟ್; ಕೇಸ್ ದಾಖಲು
Physical abuse on women in Anekal: ಮಹಿಳೆಯೊಬ್ಬರು ಹೊಟ್ಟೆ ನೋವು ಎಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್‌ಗೆ ತೆರಳಿದ್ದರು. ಆರೋಪಿ ಸ್ಕ್ಯಾನಿಂಗ್ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಧಮ್ಕಿ ಹಾಕಿದ್ದಾನೆ.
-
ಆನೇಕಲ್, ನ.12: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಲ್ಯಾಬ್ ಸಿಬ್ಬಂದಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ (Anekal News) ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ರೇಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಜಯಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ಮಹಿಳೆಯೊಬ್ಬರು ಹೊಟ್ಟೆ ನೋವು ಎಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್‌ಗೆ ತೆರಳಿದ್ದರು. ಆರೋಪಿ ಜಯಕುಮಾರ್ ಸ್ಕ್ಯಾನಿಂಗ್ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ.
ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಆರೋಪಿ ಜಯಕುಮಾರ್‌ನನ್ನು ಈವರೆಗೆ ಬಂಧಿಸಿಲ್ಲ. ಬದಲಾಗಿ ಠಾಣೆಗೆ ಕರೆಸಿ, ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ.
ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | ರಾಜ್ಯವೇ ತಲೆ ತಗ್ಗಿಸುವ ಘಟನೆ; ಅಪ್ರಾಪ್ತೆ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕ
ಯುವಕನನ್ನು ಲಾಡ್ಜ್‌ಗೆ ಕರೆದು ಚಿನ್ನಾಭರಣ ದೋಚಿದ ಯುವತಿ!
ಬೆಂಗಳೂರು, ನ. 12: ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್‌ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ (Bengaluru Fraud Case) ಪರಾರಿಯಾಗಿರುವುದು ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದ ಯುವಕ. ಈತ ನೀಡಿದ ದೂರಿನ ಮೇರೆಗೆ ಕವಿಪ್ರಿಯಾ ಎಂಬಾಕೆಯ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಾಗಿ ಬಲೆ ಬೀಸಿದ್ದಾರೆ.
ಪೀಣ್ಯದ ನಾಗಸಂದ್ರದ ಪಿಜಿಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎರಡು ತಿಂಗಳ ಹಿಂದೆ ಹ್ಯಾಪನ್ ಆ್ಯಪ್ ಹೆಸರಿನ ಡೇಟಿಂಗ್ ಆ್ಯಪ್ನಲ್ಲಿ ಯುವಕನನ್ನು ಆರೋಪಿ ಯುವತಿ ಪರಿಚಯಿಸಿಕೊಂಡಿದ್ದಳು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಪೋನ್ನಲ್ಲಿ ಮಾತನಾಡುತ್ತಿದ್ದರು. ಬಳಿಕ ನ.1ರಂದು ಇಂದಿರಾನಗರದ ರೆಸ್ಟೋರೆಂಟ್ವೊಂದರಲ್ಲಿ ಇಬ್ಬರೂ ಭೇಟಿಯಾಗಿ ಮದ್ಯ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ಧಾರೆ.
ಈ ಸುದ್ದಿಯನ್ನೂ ಓದಿ : Police Firing: ಆನೇಕಲ್‌ನಲ್ಲಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರ ಫೈರಿಂಗ್
ಮದ್ಯ ಸೇವಿಸಿದ ಬಳಿಕ ನಾನು ಪಿಜಿಗೆ ಹೋಗಲು ಸಾಧ್ಯವಿಲ್ಲ ಎಂದೆ. ಹೀಗಾಗಿ ಯುವತಿ ಲಾಡ್ಜ್ನಲ್ಲಿರೂಮ್ ಬುಕ್ ಮಾಡಿದಳು. ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಊಟವನ್ನು ಇಬ್ಬರು ಕುಳಿತುಕೊಂಡು ಸೇವಿಸಿದೆವು. ಬಳಿಕ ಯುವತಿ ಕುಡಿಯಲು ನೀರು ಕೊಟ್ಟಳು. ಸೇವಿಸಿದ ಬಳಿಕ ನನಗೆ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿತು. ಬೆಳಗ್ಗೆ ಎದ್ದು ನೋಡಿದಾಗ ಚಿನ್ನದ ಸರ, ಚಿನ್ನದ ಕೈಬಳೆ, 10 ಸಾವಿರ ನಗದು ಸೇರಿದಂತೆ ಒಟ್ಟು 6.80 ಲಕ್ಷ ರೂ ಮೌಲ್ಯದ 58 ಗ್ರಾಂ ಚಿನ್ನಾಭರಣ ಇರಲಿಲ್ಲ. ಯುವತಿ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಳು ಎಂದು ಅವಿನಾಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಹುಡುಕಾಟ ಆರಂಭಿಸಿದ್ದಾರೆ.