Fire Accident: ಬೆಂಕಿ ಅವಘಡ; ಇಬ್ಬರು ಕಾರ್ಮಿಕರ ದುರ್ಮರಣ
ರಾಜ್ಯದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷ ನ್ (23) ಎಂದು ಗುರುತಿಸಲಾಗಿದೆ.

ಸಾಂದರ್ಭಿಕ ಚಿತ್ರ.

ನೆಲಮಂಗಲ: ರಾಜ್ಯದಲ್ಲಿ ಮತ್ತೊಂದು ಬೆಂಕಿ ಅವಘಡ (Fire Accident) ನಡೆದಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷ ನ್ (23) ಎಂದು ಗುರುತಿಸಲಾಗಿದೆ. ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್ಗೆ ಸೇರಿದ ಶಿವಾನಿ ಗ್ರೀನ್ ಲೇಔಟ್ನಲ್ಲಿರುವ 3 ಅಂತಸ್ತಿನ ಕಟ್ಟಡದಲ್ಲಿ ಘಟನೆ ಈ ಘಟನೆ ಎನ್ನಲಾಗಿದೆ.
ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ವುಡ್ ವರ್ಕ್ಸ್ ಕೆಲಸ ಮಾಡಲಾಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಈ ವೇಳೆ ನೀರಿನ ಟ್ಯಾಂಕರ್ ಮೇಲೆ ಕುಳಿತುಕೊಂಡುದ್ದ ಕಾರ್ಮಿಕನೊಬ್ಬನ ರಕ್ಷಣೆ ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಮಾಧನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಬೆಂಗಳೂರಿನ ಬೈಕ್ ಶೋರೂಂಗೆ ಬೆಂಕಿ
ಬೆಂಗಳೂರಿನಲ್ಲಿ ಹೊಸ ವರ್ಷದ ಮೊದಲ ದಿನ (ಜ. 1) ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿದ್ದವು. ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಬಿ.ನಾರಾಯಣಪುರದಲ್ಲಿ ಈ ಘಟನೆ ನಡೆದಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದರು.
ಸಂಜೆ 7:30ರ ಸುಮಾರಿಗೆ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಬಳಿಕ ಬೆಂಕಿ ಇಡೀ ಶೋರೂಂಗೆ ವ್ಯಾಪಿಸಿತ್ತು. ಬೆಂಕಿಯ ಕೆನ್ನಾಲಿಗೆಗೆ ಬೈಕ್‌ಗಳು ಸುಟ್ಟು ಕರಕಲಾಗಿದ್ದವು. ಶೋರೂಂನಲ್ಲಿದ್ದ ಸುಮಾರು 30 ಬೈಕ್, ಹಿಂಭಾಗ ಸರ್ವೀಸ್ ಸೆಂಟರ್‌ನಲ್ಲಿದ್ದ 10ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿದ್ದವು. ಮಹಾದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಈ ಸುದ್ದಿಯನ್ನೂ ಓದಿ: Fire Tragedy: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಗ್ನಿ ಅವಘಡ- ಗಾರ್ಮೆಂಟ್ಸ್ ಗೋದಾಮು ಸುಟ್ಟು ಕರಕಲು
ಗೋದಾಮು ಸುಟ್ಟು ಭಸ್ಮ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜ. 2ರಂದು ಮತ್ತೊಂದು ಅಗ್ನಿ ದುರಂತ ಸಂಭವಿಸಿ, ಶಾರ್ಟ್ ಸರ್ಕ್ಯೂಟ್‌ನಿಂದ ಗಾರ್ಮೆಂಟ್ ಗೋದಾಮು ಸುಟ್ಟು ಕರಕರಾಗಿದ್ದವು. ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ಭೀಕರ ದುರ್ಘಟನೆ ನಡೆದಿದ್ದು, ಗೋದಾಮಿನಲ್ಲಿರುವಂತಹ ಬಟ್ಟೆ ವೆದರ್ ಸೇರಿದಂತೆ ಹಲೋ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು.