Labourers death: ಶೆಡ್‌ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ನಿಗೂಢ ರೀತಿಯಲ್ಲಿ ಸಾವು
ಕೋಕಾಕೋಲಾ ವೇರ್ ಹೌಸ್‌ನಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ರಾತ್ರಿ ಶೆಡ್ ಕಿಟಕಿ ಬಾಗಿಲು ಕ್ಲೋಸ್ ಮಾಡಿ ಅಡುಗೆ ಮಾಡಿದ್ದರು. ತಡರಾತ್ರಿ ಉಸಿರುಗಟ್ಟಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಜ.30 : ಶೆಡ್‌ನಲ್ಲಿ (shed) ಮಲಗಿದ್ದ ನಾಲ್ವರು ಕಾರ್ಮಿಕರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ (Labourers death) ಬೆಂಗಳೂರು ಗ್ರಾಮಾಂತರ (Bengaluru rural) ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮುತ್ಸಂದ್ರ ಗ್ರಾಮದಲ್ಲಿದ್ದ ಲೇಬರ್ ಶೆಡ್‌ನಲ್ಲಿ ಮಲಗಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಾರ್ಮಿಕರಾದ ಜಯಂತ್ ಸಿಂಧೆ (25), ನಿರೇಂದ್ರನಾಥ್ (24), ಡಾಕ್ಟರ್ ಟೈಡ್ (25), ಧನಂಜಯರ್ ಟೈಡ್ (20) ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ. ಕೋಕಾಕೋಲಾ ವೇರ್ ಹೌಸ್‌ನಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ರಾತ್ರಿ ಶೆಡ್ ಕಿಟಕಿ ಬಾಗಿಲು ಕ್ಲೋಸ್ ಮಾಡಿ ಅಡುಗೆ ಮಾಡಿದ್ದರು. ತಡರಾತ್ರಿ ಉಸಿರುಗಟ್ಟಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಂಬಿಎ ಸೀಟ್ ಸಿಗಲಿಲ್ಲ ಎಂದು ಆತ್ಮಹತ್ಯೆ
ಬೆಂಗಳೂರಿನಲ್ಲಿ ಯುವಕನೊಬ್ಬ ಎಂಬಿಎ ಸೀಟ್ ಸಿಗಲಿಲ್ಲ ಎಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನೆಲಮಂಗಲದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಶಶಾಂಕ್ (23) ನೇಣಿಗೆ ಶರಣಾಗಿದ್ದಾನೆ. ನೆಲಮಂಗಲದ ವಿಜಯನಗರದ ತಿಮ್ಮಕ್ಕ ಲೇಔಟ್‌ನಲ್ಲಿರುವ ಮನೆಯಲ್ಲಿ ತಡರಾತ್ರಿ ಶಶಾಂಕ್ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.
ಇಂಜೆಕ್ಷನ್, ಇನ್‌ಸ್ಟಾಗ್ರಾಂ ಪೋಸ್ಟ್, ವೈರಲ್ ವಿಡಿಯೊ: ರಾಜಸ್ಥಾನದ ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು