ಬೆಂಗಳೂರು: ಆಶ್ರಯ ಯೋಜನೆಯ ಭೂ ವಿವಾದಕ್ಕೆ ಸಂಬಂಧಿಸಿದಂತೆ 25 ವರ್ಷದ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಹೊಸಕೋಟೆ ತಾಲೂಕಿನ ಸೋಲೂರು ಗ್ರಾಮದಲ್ಲಿ ನಡೆದಿದೆ. 25 ವರ್ಷದ (Muder Case) ಲಿಖಿತ್ ಗೌಡ ಮೃತ ದುರ್ದೈವಿ. ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಗೌಡ ಲಿಖಿತ್ ಗೌಡಗೆ ಡಬಲ್ ಬ್ಯಾರಲ್ (Bengaluru News) ಗನ್ನಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಆಶ್ರಯ ಮನೆಗಳ ನಿರ್ಮಾಣಕ್ಕೆ ಜಮೀನು ಗುರುತು ಮಾಡುವ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆ ಸರ್ಕಾರಿ ಜಮೀನಿನ ಸುಮಾರು 10 ಗುಂಟೆ ಜಾಗವನ್ನು ಆರೋಪಿ ರಮೇಶ್ ಒತ್ತುವರಿ ಮಾಡಿಕೊಂಡಿದ್ದರು. ಹೀಗಾಗಿ ಒತ್ತುವರಿ ತೆರವಿಗೆ ಹೋಗಿದ್ದ ವೇಳೆ ರಮೇಶ್ ಮತ್ತು ಲಿಖಿತ್ ಗೌಡ ನಡುವೆ ಗಲಾಟೆ ನಡೆದಿದೆ. ಈ ವೇಳೆ ಲೈಸೆನ್ಡ್ ಗನ್ ನಿಂದ ರಮೇಶ್, ಲಿಖಿತ್ ಗೌಡ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಲಿಖಿತ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ. ಹೊಸಕೋಟೆ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ, ಆರೋಪಿ ರಮೇಶ್ ಗೌಡನನ್ನು ವಶಕ್ಕೆ ಪಡೆದಿದ್ದಾರೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆದ ಕಲಹ ವಿಕೋಪಕ್ಕೆ ತಿರುಗಿ ಅತ್ತೆ ಮತ್ತು ಅಳಿಯನನ್ನು ಸಂಬಂಧಿಕರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಗ್ರಾಮದ ರಮೇಶ್ ಹಣಮಂತ ನಾಯ್ಕರ (29) ಹಾಗೂ ಬಸವ್ವ ಭೀಮಪ್ಪ ನಾಯ್ಕರ (60) ಕೊಲೆಯಾದವರು. ಆಸ್ತಿ ವಿಚಾರವಾಗಿ ಕುಟುಂಬದ ನಡುವೆ ಮೊದಲಿನಿಂದಲೂ ವಿವಾದವಿತ್ತು ಎನ್ನಲಾಗಿದ್ದು, ಇದೇ ದ್ವೇಷ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಾರ್ಖಂಡ್‌ನಲ್ಲಿ ಭೀಕರ ಜೋಡಿ ಕೊಲೆ: ಪತ್ನಿಯರನ್ನು ಕೊಂದು ಕಾಡಿನಲ್ಲಿ ಹೂತ ಸಹೋದರರು
ಆಸ್ತಿ ವಿಚಾರವಾಗಿ ನಡೆದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು ಇಬ್ಬರ ಹತ್ಯೆಗೆ ಕಾರಣವಾಗಿದೆ ಎನ್ನಲಾಗಿದೆ. ಒಂದೇ ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವುದು ಗ್ರಾಮದಲ್ಲಿ ಆತಂಕ ಹಾಗೂ ಆಘಾತಕ್ಕೆ ಕಾರಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮುರಗೋಡ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.