Murder Case: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಪತಿ!
Murder Case: ಆನೇಕಲ್‌ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ಘಟನೆ ನಡೆದಿದೆ. ಮಗನನ್ನು ಶಾಲೆಗೆ ಬಿಡಲು ಬಂದಿದ್ದ ಪತ್ನಿಯನ್ನು ಪತಿ ರಸ್ತೆಯಲ್ಲಿ ಅಡ್ಡಗಟ್ಟಿ, ಚಾಕುವಿನಿಂದ ಇರಿದು ಕೊಂದಿದ್ದಾನೆ.
ಬೆಂಗಳೂರು: ಅನೈತಿಕ ಸಂಬಂಧ ಶಂಕೆಯಿಂದ ನಡುರಸ್ತೆಯಲ್ಲೇ ಪತ್ನಿಯನ್ನು ಪತಿ ಏಳೆಂಟು ಬಾರಿ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ (Murder Case) ಮಾಡಿರುವ ಘಟನೆ ಆನೇಕಲ್‌ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ಶ್ರೀಗಂಗಾಗೆ (29) ಕೊಲೆಯಾದವರು. ಮೋಹನ್ ರಾಜ್ (32) ಆರೋಪಿ. ಬೆಳಗ್ಗೆ ಮಗನನ್ನು ಶಾಲೆಗೆ ಬಿಡಲು ಬಂದಿದ್ದ ಪತ್ನಿಯನ್ನು ಮೋಹನ್ ರಾಜ್ ರಸ್ತೆ ಮಧ್ಯೆ ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ದಂಪತಿಗೆ 7 ವರ್ಷಗಳ ಹಿಂದೆ ಮದುವೆಯಾಗಿತ್ತು. ಆದರೆ ಶ್ರೀಗಂಗಾ ತನ್ನ ಸ್ನೇಹಿತನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಶಂಕೆಯಿಂದಾಗಿ ಮೋಹನ್ ರಾಜ್ ಪದೇ ಪದೇ ಜಗಳ ತೆಗೆಯುತ್ತಿದ್ದ. ಹೀಗಾಗಿ ಶ್ರೀಗಂಗೆ 8 ತಿಂಗಳಿನಿಂದ ಪತಿಯಿಂದ ದೂರವಾಗಿದ್ದಳು. ಆದರೆ ನಿನ್ನೆ ರಾತ್ರಿ ಮೋಹನ್ ರಾಜ್ ತನ್ನ ಮಗುವನ್ನು ನೋಡಲು ಮನೆಗೆ ಬಂದಿದ್ದ. ಆಗ ಕೂಡ ಇಬ್ಬರ ಮಧ್ಯೆ ಜಗಳವಾಗಿತ್ತು.
ಬುಧವಾರ ಪತ್ನಿಯನ್ನು ಕೊಲ್ಲಲೇಬೇಕೆಂಬ ಉದ್ದೇಶದಿಂದ ಮೋಹನ್ ರಾಜ್ ಚೂರಿ ಸಮೇತ ಹೋಗಿದ್ದಿ, ಪತ್ನಿಯ ಮೇಲೆ ಹಲ್ಲೆ ಮಾಡಿ ಕೊಂದಿದ್ದಾನೆ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಶ್ರೀಗಂಗಾಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಆರೋಪಿ ಮೋಹನ್ ರಾಜ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Assault Case: ಹೋಟೆಲ್‌ನಲ್ಲಿ ಕನ್ನಡದಲ್ಲಿ ಮಾತಾಡಿ ಎಂದಿದ್ದಕ್ಕೆ ಗ್ರಾಹಕನ ಮೇಲೆ ಹಿಂದಿ ಭಾಷಿಕರ ಹಲ್ಲೆ!
ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ರಾಮನಗರ: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಡಾ.ಚಂದ್ರಮ್ಮ ದಯಾನಂದ ಸಾಗರ್ ಕಾಲೇಜಿನಲ್ಲಿ (Dayananda Sagar College) ನಡೆದಿದೆ. ಅನಾಮಿಕಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಅನಾಮಿಕ ಕೇರಳ ಮೂಲದ ಕಣ್ಣೂರಿನ ವಿದ್ಯಾರ್ಥಿನಿ ಆಗಿದ್ದು, ಮೊದಲ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹಾಸ್ಟೆಲ್‌ನಲ್ಲಿ ಊಟಕ್ಕೆ ಬಾರದ ಹಿನ್ನೆಲೆಯಲ್ಲಿ ಸಹ ವಿದ್ಯಾರ್ಥಿನಿಯರು ರೂಮ್ ಬಳಿ ಹೋಗಿದ್ದಾರೆ. ಬಾಗಿಲು ತಟ್ಟಿದ್ದರೂ ತೆಗೆಯದೇ ಇದ್ದರಿಂದ ಕಿಟಕಿಯಿಂದ ನೋಡಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾರೋಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Viral Video: ವಧುವಿಗೆ ಕಪಾಳಮೋಕ್ಷ ಮಾಡಿ ಸಸ್ಪೆಂಡ್ ಆದ ವರ!ಏನಿದು ವಿವಾದ?
ಯಾದಗಿರಿಯಲ್ಲಿ ಬೈಕ್‌ಗೆ ಬಸ್ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಭೀಕರ ಅಪಘಾತ (Road Accident) ಸಂಭವಿಸಿದ್ದು, ಸಾರಿಗೆ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ: ಡಿ.ಕೆ.ಶಿವಕುಮಾರ್ ತರಾಟೆ