Nelamangala News: ಕಣೇಗೌಡನಹಳ್ಳಿ ಗ್ರಾಪಂ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಎನ್. ಶ್ರೀನಿವಾಸ್
Kanegowdanahalli Gram Panchayat: ಕಣೇಗೌಡನಹಳ್ಳಿ ಗ್ರಾಮ ಪಂಚಾಯಿತಿಯ ಹೊಸ ಕಟ್ಟಡವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮತ್ತು ನೆಲಮಂಗಲ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ನಿರ್ಮಿಸಲಾಗಿದೆ. ನೂತನ ಕಟ್ಟಡವನ್ನು ಶಾಸಕ ಎನ್.ಶ್ರೀನಿವಾಸ್ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ.

-

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ (Nelamangala News) ಕಣೇಗೌಡನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ (Kanegowdanahalli Gram Panchayat) ನೂತನ ಕಟ್ಟಡವನ್ನು ಶಾಸಕ ಎನ್.ಶ್ರೀನಿವಾಸ್ ಅವರು ಶುಕ್ರವಾರ ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಮಣಾನಂದ ಸ್ವಾಮೀಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ನಾರಾಯಣಸ್ವಾಮಿ, ಉಪಾಧ್ಯಕ್ಷರಾದ ಶಿವಣ್ಣ, ಸದಸ್ಯರುಗಳು ಸೇರಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.
ಗ್ರಾಮ ಪಂಚಾಯಿತಿಯ ಹೊಸ ಕಟ್ಟಡವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮತ್ತು ನೆಲಮಂಗಲ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ನಿರ್ಮಿಸಲಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಎಂ. ಶ್ರೀನಿವಾಸ್ ಅವರು, "ಹೊಸ ಕಟ್ಟಡದಲ್ಲಿ ಉತ್ತಮ ಮೂಲಸೌಕರ್ಯ ಒದಗಿಸಲಾಗಿದೆ. ಪಾರದರ್ಶಕ ಆಡಳಿತ ಮತ್ತು ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಗ್ರಾಮಸ್ಥರು ಒಂದೇ ಸೂರಿನಡಿ ಪಡೆಯಲು ಇದು ಸಹಕಾರಿಯಾಗುತ್ತದೆ. ಈ ಹೊಸ ಕಟ್ಟಡ ಸ್ಥಳೀಯ ಆಡಳಿತಕ್ಕೆ ಇನ್ನಷ್ಟು ಬಲ ನೀಡಲಿದೆ" ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರು, ಇಲಾಖಾ ಅಧಿಕಾರಿಗಳು ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ವ್ಯವಸಾಯೋತ್ಪನ್ನಗಳ ಸಹಕಾರ ಸಂಘದ ನೂತನ ಮಳಿಗೆ ಉದ್ಘಾಟನೆ
ನೆಲಮಂಗಲ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘದ ನೂತನ ಸಂಕೀರ್ಣವನ್ನು ಶಾಸಕ ಶ್ರೀ ಎನ್. ಶ್ರೀನಿವಾಸ್ ಅವರು ಉದ್ಘಾಟಿಸಿದರು. ಇದರಿಂದ ರೈತರ ಬಹುದಿನಗಳ ಕನಸು ನನಸಾಗಿದ್ದು, ಆಧುನಿಕ ಕಟ್ಟಡ, ವಿಶಾಲವಾದ ಉಗ್ರಾಣ ಮತ್ತು ಸುಸಜ್ಜಿತ ಮಾರಾಟ ಮಳಿಗೆ ರೈತರಿಗೆ ಸಮರ್ಪಣೆ ಮಾಡಲಾಗಿದೆ.
ಈ ನೂತನ ಸಂಕೀರ್ಣದಿಂದ ತಾಲೂಕಿನ ಕೃಷಿ ವಲಯಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂದು ಗಣ್ಯರ ಅಭಿಮತ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ತಾಲ್ಲೂಕಿನ ಎಲ್ಲ ಸಹಕಾರ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು.