ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನೆಲಮಂಗಲದಲ್ಲಿ 100 ಹಾಸಿಗೆಯ ಸುಸಜ್ಜಿತ ಆಸ್ಪತ್ರೆಗೆ ಶೀಘ್ರದಲ್ಲೇ ಭೂಮಿ ಪೂಜೆ: ಶಾಸಕ ಎನ್. ಶ್ರೀನಿವಾಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಈಶ್ವರ ಸ್ವರೂಪಿ ಶ್ರೀ ಮುನೇಶ್ವರ ಸ್ವಾಮಿ ಹಾಗೂ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಶಾಸಕ ಎನ್. ಶ್ರೀನಿವಾಸ್ ಮಾತನಾಡಿದ್ದಾರೆ. ನೆಲಮಂಗಲದಲ್ಲಿ 2 ಎಕರೆ 30 ಗುಂಟೆ ಜಾಗದಲ್ಲಿ 32.5 ಕೋಟಿ ವೆಚ್ಚದ ತಾಲೂಕು ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

100 ಹಾಸಿಗೆಯ ಆಸ್ಪತ್ರೆಗೆ ಶೀಘ್ರದಲ್ಲೇ ಭೂಮಿ ಪೂಜೆ: ಶಾಸಕ ಎನ್. ಶ್ರೀನಿವಾಸ್

Profile Prabhakara R Mar 23, 2025 7:19 PM

ನೆಲಮಂಗಲ: ತಾಲೂಕಿನಲ್ಲಿ 100 ಹಾಸಿಗೆಯುಳ್ಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ (Nelamangala Hospital) ಅತಿ ಶೀಘ್ರದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ. ಶ್ರೀ ಪವಾಡ ಬಸವಣ್ಣ ದೇವರ ಮಠದ ಸಿದ್ದಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸುತ್ತೇನೆ. 2 ಎಕರೆ 30 ಗುಂಟೆ ಜಾಗದಲ್ಲಿ 32.5 ಕೋಟಿ ವೆಚ್ಚದ ತಾಲೂಕು ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಎಂದು ಶಾಸಕ ಎನ್. ಶ್ರೀನಿವಾಸ್ (MLA N Srinivas) ತಿಳಿಸಿದ್ದಾರೆ. ನೆಲಮಂಗಲ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಈಶ್ವರ ಸ್ವರೂಪಿ ಶ್ರೀ ಮುನೇಶ್ವರ ಸ್ವಾಮಿ ಹಾಗೂ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಶಾಸಕರು ಮಾತನಾಡಿದ್ದಾರೆ.

ನನ್ನ ಬಗ್ಗೆ ಯಾವುದೇ ರೀತಿ ಅಪಪ್ರಚಾರ ಮಾಡಿದರೂ, ನನ್ನ ಕೆಲಸಗಳೇ ನನಗೆ ಶ್ರೀರಕ್ಷೆ. ತಾಲೂಕಿಗೆ ವೃಷಭಾವತಿ ವ್ಯಾಲಿ ಯೋಜನೆ ತರಲು ನಾನು ಪಟ್ಟ ಶ್ರಮ ನನಗೆ ಗೊತ್ತು. ನಾನು ಮಾಡಿರುವಂತಹ ಸಾಧನೆಯನ್ನು, ತಾಲೂಕಿನ ಪ್ರತಿ ಮನೆಮನೆಗೂ ತಲುಪಿಸುವ ಕೆಲಸ ಮಾಡುತ್ತೇನೆ. 1 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದೇನೆ. ಯಾರಾದರೂ ಒಂದು ಸಾವಿರ ಕೋಟಿಗೂ ಹೆಚ್ಚು ಅನುದಾನ ತಂದಿರುವ ಉದಾಹರಣೆ ತೋರಿಸಿದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧ ಎಂದು ಸವಾಲು ಹಾಕಿದರು.

ನಾನು ಯಾವುದೇ ರೀತಿಯ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿಲ್ಲ. ತಾಲೂಕಿನ ಜನರಿಗೆ ಯಾವುದೇ ರೀತಿಯ ತೊಂದರೆಯನ್ನೂ ಕೊಟ್ಟಿಲ್ಲ. ಚುನಾವಣೆ ಸಂದರ್ಭದಲ್ಲಿ ನನ್ನ ಮೇಲೆ ಸಾಕಷ್ಟು ಅಪಪ್ರಚಾರ ಮಾಡಿದರು. ನಾನು ರೌಡಿ ಶೀಟರ್ ಎಂದರು. ನನ್ನ ಮೇಲೆ ಇದುವರೆಗೂ ಯಾವುದೇ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿಲ್ಲ. ಅಟ್ರಾಸಿಟಿ ಕೇಸ್ ಹಾಕಿಸುತ್ತಾನೆ ಎಂದರು, ಕ್ಷೇತ್ರದಲ್ಲಿ ಒಂದೇ ಒಂದು ಪ್ರಕರಣಗಳು ಆ ರೀತಿ ನಡೆದಿಲ್ಲ ಎಂದು ಕಿಡಿಕಾರಿದರು.

ಈ ಸುದ್ದಿಯನ್ನೂ ಓದಿ | Vishweshwar Hegde Kageri Interview: ಶಾಸಕರ ಅಮಾನತು, ಕ್ಷೇತ್ರದ ಜನತೆಗೆ ಮಾಡಿದ ಅಪಮಾನ