ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಟಾಟಾ ಏಸ್-ಸ್ಕೂಟರ್‌ ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು

ಡಿ ಮಾರ್ಟ್‌ನಿಂದ ದಿನಸಿ ಸಾಮಗ್ರಿ ಖರೀದಿಸಿ ತಾಯಿ-ಮಗ ಡಿಯೋ ಸ್ಕೂಟರ್‌ನಲ್ಲಿ ಮನೆಯತ್ತ ಸಾಗುತ್ತಿದ್ದಾಗ ಎದುರಿಗೆ ಬಂದ ಟಾಟಾ ಏಸ್‌ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲೇ ತಾಯಿ-ಮಗ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನೆಲಮಂಗಲ ಬಳಿ ಸ್ಕೂಟರ್‌-ಟಾಟಾ ಏಸ್‌ ಡಿಕ್ಕಿಯಾಗಿರುವುದು.

ಬೆಂಗಳೂರು: ಟಾಟಾ ಏಸ್ ಹಾಗೂ ಸ್ಕೂಟರ್‌ ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿಯಲ್ಲಿ ನಡೆದಿದೆ. ಶೈಲಜಾ (45) ಹಾಗೂ ಪ್ರಜ್ವಲ್ (26) ಮೃತ ತಾಯಿ-ಮಗ.

ತಾಯಿ-ಮಗ ದಿನಸಿ ಸಾಮಗ್ರಿ ಖರೀದಿಸಿ ಡಿಯೋ ಸ್ಕೂಟರ್‌ನಲ್ಲಿ ಮನೆಯತ್ತ ಸಾಗುತ್ತಿದ್ದರು. ಈ ವೇಳೆ ಎದುರುನಿಂದ ಬಂದ ಟಾಟಾ ಏಸ್‌ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲೇ ತಾಯಿ-ಮಗ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರು ಡಿಕ್ಕಿಯಾಗಿ ಡೆಲಿವರಿ ಬಾಯ್‌ ಸಾವು

ಬೆಂಗಳೂರು: ನಗರದ ಕೆ.ಆರ್. ಪುರಂನ ಭಟ್ಟರಹಳ್ಳಿ ಸಿಗ್ನಲ್ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೇಪಾಳ ಮೂಲದ ಸುರೇಂದರ್ ಬಹದ್ದೂರ್(38) ಮೃತರು. ಡೆಲಿವರಿ ಕೊಡಲು ಹೋಗುವಾಗ ಬೈಕ್‌ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡೆಲಿವರಿ ಬಾಯ್‌ ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಕಾರು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೆ ಆರ್ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗಳು ಪ್ರಿಯಕರನೊಟ್ಟಿಗೆ ಎಸ್ಕೇಪ್‌; ಇತ್ತ ಪತಿಗೇ ಚಾಕು ಇರಿದು ಕೊಲೆ ಮಾಡಿದ ಪತ್ನಿ

ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್‌ ಪೇದೆ ಅರೆಸ್ಟ್

ಬೆಂಗಳೂರು: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಬಂಧಿಸಲಾಗಿದೆ. ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣೆಯ ಯಮನಾ ನಾಯಕ್ ಬಂಧಿತ ಆರೋಪಿ.

ಕಾನ್ಸ್ ಸ್ಟೇಬಲ್‌ ಯಮನಾ ನಾಯಕ್ ಅವರನ್ನು ಫ್ರೀಡಂ ಪಾರ್ಕ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಸಂತ್ರಸ್ತೆ ಉಪ್ಪಾರಪೇಟೆ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೇದೆ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ, ಬಂಧಿಸಲಾಗಿದೆ.