ದೊಡ್ಡಬಳ್ಳಾಪುರ: ಶನಿ ಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಹಿಂದೂಗಳ ಮೇಲೆ ಮುಸ್ಲಿಂ ಯುವಕನೊಬ್ಬ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapur News) ನಡೆದಿದೆ. ಸದ್ಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿರುವ ಶನಿಮಹಾತ್ಮ ದೇವಸ್ಥಾನದಲ್ಲಿ ಬೆಳಗ್ಗೆ ಸುಪ್ರಭಾತ ಹಾಕಲಾಗಿತ್ತು. ಇದಕ್ಕೆ ಮುಸ್ಲಿಂ ಯುವಕ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ, ಸೌಂಡ್ ಕಡಿಮೆ ಮಾಡಿ, ಇಲ್ಲವೆ ಆಫ್ ಮಾಡಿ ಎಂದು ಧಮ್ಕಿ ಹಾಕಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಆಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದ್ದಾರೆ.
ಇದೇ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ ಯುವಕರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದೆ. ನಂತರ ದೇವಸ್ಥಾನದ ಪೂಜಾರಿ ನೀಡಿದ ದೂರಿನನ್ವಯ ದೊಡ್ಡಬಳ್ಳಾಪುರ ನಗರ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದು, ಪೊಲೀಸರು ಎರಡು ಕಡೆಯವರಿಗೆ ಬುದ್ಧಿ ಹೇಳಿ ಕಳುಹಿಸಿದ್ದಾರೆ.
ಬೆಂಗಳೂರಿನಲ್ಲಿ 4ನೇ ಮಹಡಿಯಿಂದ ಬಿದ್ದು ಯುವಕ ಸಾವು
ಬೆಂಗಳೂರು: ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಇರ್ಫಾನ್ ಮುಲ್ಲಾನಿ (26) ಎಂದು ಗುರುತಿಸಲಾಗಿದೆ. ಜನವರಿ 30ರಂದು ಭಾರತಿನಗರದ ಫ್ರೂಟ್ಸ್ ಮಾರ್ಕೆಟ್ ಸಮೀಪ ದುರ್ಘಟನೆ ಸಂಭವಿಸಿದೆ.
ಇರ್ಫಾನ್ ಮುಲ್ಲಾನಿ ಭಾರತಿನಗರದಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದ. ಈ ವೇಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಕೆಳಕ್ಕೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ಮುಂದಾದ ವೇಳೆ ಆತನ ಕೊನೆಯುಸಿರೆಳೆದಿದ್ದ ಎಂದು ತಿಳಿದುಬಂದಿದೆ.
ಇರ್ಫಾನ್ ನಾಲ್ಕನೇ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೋ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದು ತಿಳಿದುಬಂದಿಲ್ಲ. ಯುವಕನು ಸಂಬಂಧಿಕರ ಮನೆಗೆ ಬಂದಿದ್ದಾಗ ದುರ್ಘಟನೆ ಸಂಭವಿಸಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ.
ಸಮುದಾಯಗಳ ನಡುವೆ ಕೋಮು ಘರ್ಷಣೆ; ಮನೆಗಳು, ವಾಹನಗಳಿಗೆ ಬೆಂಕಿ, ಮೂವರ ಬಂಧನ
ಭಾರತಿನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ. ಸದ್ಯಕ್ಕೆ ಪೊಲೀಸರು ಇದನ್ನು 'ಅಸಹಜ ಸಾವು' ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.