ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Nelamangala News: ವಿಶ್ವ ಗಾಣಿಗ ಸಮುದಾಯ ಟ್ರಸ್ಟ್‌ಗೆ ಅನುದಾನ ಬಿಡುಗಡೆಗೆ ಸಚಿವ ತಂಗಡಗಿ ತಾರತಮ್ಯ: ಪೂರ್ಣಾನಂದಪುರಿ ಶ್ರೀ ಆರೋಪ

Nelamangala News: ವಿಶ್ವ ಗಾಣಿಗ ಸಮುದಾಯ ಚಾರಿಟಬಲ್‌ ಟ್ರಸ್ಟ್‌ಗೆ ಮಂಜೂರಾದ ಹಣ ಬಿಡುಗಡೆ ಮಾಡದೇ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಚಿವ ಶಿವರಾಜ್ ತಂಗಡಗಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಆರೋಪಿಸಿದ್ದಾರೆ.

ಟ್ರಸ್ಟ್‌ಗೆ ಅನುದಾನ ಬಿಡುಗಡೆಗೆ ತಾರತಮ್ಯ: ಪೂರ್ಣಾನಂದಪುರಿ ಶ್ರೀ

Profile Siddalinga Swamy Feb 15, 2025 9:37 PM

ನೆಲಮಂಗಲ: ವಿಶ್ವ ಗಾಣಿಗ ಸಮುದಾಯ ಚಾರಿಟಬಲ್‌ ಟ್ರಸ್ಟ್‌ಗೆ ಮಂಜೂರಾದ ಹಣ ಬಿಡುಗಡೆ ಮಾಡದೇ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಚಿವ ಶಿವರಾಜ್ ತಂಗಡಗಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಆರೋಪಿಸಿದ್ದಾರೆ. (Nelamangala News) ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಹಿಂದಿನ ಸರ್ಕಾರ ವಿಶ್ವ ಗಾಣಿಗ ಸಮುದಾಯ ಚಾರಿಟಬಲ್‌ ಟ್ರಸ್ಟ್‌ಗೆ 3.5 ಕೋಟಿ ಅನುದಾನ ನೀಡಿದ್ದು, ಈಗಾಗಲೇ ಎರಡು ಕೋಟಿ ನೀಡಿದ್ದು, ಬಾಕಿ 1.5 ಕೋಟಿ ಹಣ ಬಿಡುಗಡೆಗೆ ಸಚಿವ ಶಿವರಾಜ್ ತಂಗಡಗಿ ಅವರು ಮೀನಮೇಷ ಎಣಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಮುಖ್ಯಮಂತ್ರಿಗಳ ಆದೇಶ ಮಾಡಿದ್ದರೂ ಕ್ಯಾರೆ ಎನ್ನದ ಸಚಿವ, ಹಿಂದುಳಿದ ವರ್ಗದ ಮಠದ ಅಭಿವೃದ್ದಿಗೆ ಅಸಹಕಾರ ತೋರಿದ್ದಾರೆ. ಸರ್ಕಾರವನ್ನಾಗಲಿ, ಮುಖ್ಯಮಂತ್ರಿಯನ್ನಾಗಲಿ ನಾನು ದೂಷಿಸಲ್ಲ. ಕೇವಲ ಸಚಿವರಿಂದ ಅನ್ಯಾಯ ಎಂದು ಅವರು ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | Karnataka Weather: ಚಳಿಗಾಲದಲ್ಲೂ ಬಿಸಿಲಿನ ಅಬ್ಬರ; ಮುಂದಿನ 6 ದಿನ ರಾಜ್ಯಾದ್ಯಂತ ಒಣ ಹವೆ

ಕಳೆದ ಆರು ತಿಂಗಳಿಂದ ಅಲೆದಾಡುತ್ತಿದ್ದು, ಮುಖ್ಯಮಂತ್ರಿಯವರ ಶಿಫಾರಸ್ಸಾಗಿರುವ ಫೈಲ್, ಸಚಿವರ ಬಳಿಯೇ ಉಳಿಸಿಕೊಂಡ ಉದ್ದೇಶ ಏನಿದೆ ಎಂದು ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಪ್ರಶ್ನಿಸಿದ್ದಾರೆ.