Nelamangala News: ಜಗದೀಶ್ ಚೌಧರಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ; ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪತ್ರಕರ್ತರ ಮನವಿ
ಪತ್ರಕರ್ತರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಧಮ್ಮಿ ಹಾಕಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌದರಿ ಉಚ್ಛಾಟನೆ ಆಗಬೇಕು, ಬಹಿರಂಗವಾಗಿ ಪತ್ರಕರ್ತರಿಗೆ ಕ್ಷಮೆಯಾಚಿಸಬೇಕು ಎಂದು ಪ್ರೆಸ್‌ಕ್ಲಬ್ ಕೌನ್ಸಿಲ್‌ನ ಜಿಲ್ಲಾಧ್ಯಕ್ಷ ಮಂಜುನಾಥ್ ಒತ್ತಾಯಿಸಿದ್ದಾರೆ. (Nelamangala News) ಈ ಕುರಿತ ವಿವರ ಇಲ್ಲಿದೆ.
Vishwavani News
December 13, 2024
ನೆಲಮಂಗಲ: ಪತ್ರಕರ್ತರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಧಮ್ಮಿ ಹಾಕಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಉಚ್ಚಟನೆ ಆಗಬೇಕು, ಬಹಿರಂಗವಾಗಿ ಪತ್ರಕರ್ತರಿಗೆ ಕ್ಷಮೆಯಾಚಿಸಬೇಕು ಎಂದು ಪ್ರೆಸ್‌ಕ್ಲಬ್ ಕೌನ್ಸಿಲ್‌ನ ಜಿಲ್ಲಾಧ್ಯಕ್ಷ ಮಂಜುನಾಥ್ ಒತ್ತಾಯಿಸಿದ್ದಾರೆ. ಈ ಕುರಿತು ತಾಲೂಕಿನ (Nelamangala News) ಸೋಂಪುರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ವಿರುದ್ದ ಶಿಸ್ತುಕ್ರಮ ಕೈಗೊಳ್ಳಬೇಕು, ಪತ್ರಕರ್ತರಿಗೆ ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು ಇಲ್ಲದಿದ್ದರೆ ಬಿಜೆಪಿ ಕಾರ್ಯಕ್ರಮಗಳಿಗೆ ಕಪ್ಪುಪಟ್ಟಿ ಧರಿಸಿ ಭಾಗವಹಿಸಲು ತೀರ್ಮಾನಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು ಸಂಸ್ಕೃತಿ, ಸಂಸ್ಕಾರದ ಶಿಸ್ತು ಇದೆ. ಆದರೆ ನೆಲಮಂಗಲ ತಾಲೂಕು ಅಧ್ಯಕ್ಷ ಜಗದೀಶ್ ಚೌದರಿ ಪತ್ರಕರ್ತರಿಗೆ ನಿಂದನೆ ಮಾಡಿ, ಧಮ್ಕಿ ಹಾಕಿರುವುದು ಖಂಡನೀಯ ಎಂದು ಅವರು ದೂರಿದ್ದಾರೆ.
ಈ ಸುದ್ದಿಯನ್ನೂ ಓದಿ | Bengaluru Power Cut: ಡಿ.14, 15ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಪ್ರೆಸ್ ಕ್ಲಬ್ ಕೌನ್ಸಿಲ್ ತಾಲೂಕು ಅಧ್ಯಕ್ಷ ಗಂಗಾಧರ್ ಟಿ.ಜಿ. ಮಾತನಾಡಿದರು. ಈ ಸಂದರ್ಭದಲ್ಲಿ ಪ್ರೆಸ್‌ಕ್ಲಬ್ ಕೌನ್ಸಿಲ್ ರಾಜ್ಯ ಕಾರ್ಯದರ್ಶಿ ಆರ್. ಕೊಟ್ರೇಶ್, ಸಿದ್ದರಾಜು, ಪವನ್, ಭಾನುಪ್ರಕಾಶ್, ವಿಜಯ್ ಹಾಗೂ ಅಲಿಂ, ಗುರುಪ್ರಸಾದ್ ಮತ್ತು ಪತ್ರಕರ್ತರಾದ ಪ್ರದೀಪ್, ರುದ್ರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.