Road Accident: ಚಟ್ಟ ಹತ್ತಿಸಿದ ವ್ಹೀಲಿಂಗ್ ಚಟ, ಟ್ಯಾಂಕರ್ ಡಿಕ್ಕಿಯಾಗಿ ಇಬ್ಬರು ಯುವಕರು ಬಲಿ
Road Accident: ಚಟ್ಟ ಹತ್ತಿಸಿದ ವ್ಹೀಲಿಂಗ್ ಚಟ, ಟ್ಯಾಂಕರ್ ಡಿಕ್ಕಿಯಾಗಿ ಇಬ್ಬರು ಯುವಕರು ಬಲಿ
ಹರೀಶ್ ಕೇರ
December 27, 2024
ಬೆಂಗಳೂರು: ಬೆಂಗಳೂರು (Bengaluru news) ಗ್ರಾಮಾಂತರ ಜಿಲ್ಲೆಯ ವಿಜಯಪುರ ಬೈಪಾಸ್ ಬಳಿ ವ್ಹೀಲಿಂಗ್ (Bike wheeling) ಕ್ರೇಜ್‌ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ವ್ಹೀಲಿಂಗ್ ಮಾಡುತ್ತಿದ್ದಾಗಲೇ ಟ್ಯಾಂಕರ್ ಡಿಕ್ಕಿಯಾಗಿ (Road Accident) ಯುವಕರು ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಬೈಕ್ ವ್ಹೀಲಿಂಗ್ ಮಾಡುವಾಗ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ಅರ್ಫಾಜ್ (22) ಮನೋಜ್ (22) ಎಂದು ಗುರುತಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್‌ನಲ್ಲಿ ಅರ್ಫಾಜ್ ಮತ್ತು ಮನೋಜ್ ವ್ಹೀಲಿಂಗ್ ಮಾಡುತ್ತಿದ್ದಾಗ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಮೊಬೈಲ್ ಜಾಸ್ತಿ ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿ ಯುವತಿ ಆತ್ಮಹತ್ಯೆ
ಶಿವಮೊಗ್ಗ: ಮೊಬೈಲ್ ಜಾಸ್ತಿ ನೋಡಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ.
ಈಕೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮೊಬೈಲ್ ಜಾಸ್ತಿ ಬಳಸುತ್ತಿದ್ದ ಹಿನ್ನೆಲೆಯಲ್ಲಿ ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಪೋಷಕರು ಬುದ್ಧಿವಾದ ಹೇಳಿದ್ದರು.
ಇದೇ ವಿಚಾರಕ್ಕೆ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ಯುವತಿಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಯುವತಿ ಮೃತಪಟ್ಟಿದ್ದಾಳೆ.
ಇದನ್ನೂ ಓದಿ: Physical Abuse: ರಾಮನಗರದಲ್ಲಿ ಬ್ಯೂಟಿಷಿಯನ್ ಮೇಲೆ ಅತ್ಯಾಚಾರ; ರಿಯಲ್ ಎಸ್ಟೇಟ್ ಏಜೆಂಟ್ ಅರೆಸ್ಟ್