ಬೆಂಗಳೂರು, ಡಿ.12 : ಮಾಜಿ ಸಚಿವ ಹೆಚ್ಎಂ ರೇವಣ್ಣ (HM Revanna) ಅವರ ಪುತ್ರನ ಒಡೆತನದ ಕಾರು (Road Accident) ಅಪಘಾತವಾಗಿದ್ದು, ಕಾರು ಡಿಕ್ಕಿಯಾಗಿ 27 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡಿಮರನಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಹೆಚ್‌ಎಂ ರೇವಣ್ಣ ಪುತ್ರ ಶಶಾಂಕ್‌ಗೆ ಸೇರಿರುವ ಈ ಕಾರು ತಡರಾತ್ರಿ ಡಿಕ್ಕಿಯಾಗಿ ಬೈಕ್ ಸವಾರ ರಾಜೇಶ್ (27) ಸಾವಿಗೀಡಾಗಿದ್ದಾನೆ.
ಮೃತ ಯುವಕ ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. KA 51 MQ 0555 ನಂಬರ್ ಶಶಾಂಕ್ ಮಾಲೀಕತ್ವದ ಕಾರು ಎಂದು ತಿಳಿದು ಬಂದಿದೆ. ಕಾರು ಮಾಗಡಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಅಪಘಾತದ ಕುರಿತು ಕುದುರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಈ ವಿಚಾರವಾಗಿ ಸಚಿವ ಹೆಚ್ಎಂ ರೇವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದು, ನನ್ನ ಮಗನ ಕಾರು ಅಪಘಾತ ಆಗಿರುವುದು ನಿಜ. ಕಾರು ಓಡಿಸುತ್ತಿದ್ದದ್ದು ನನ್ನ ಮಗ ಅಲ್ಲ, ಡ್ರೈವರ್. ಓವರ್ಟೇಕ್ ಮಾಡುವಾಗ ಈ ಅಪಘಾತ ಆಗಿದೆ. ಮೃತ ಯುವಕನ ಕುಟುಂಬಸ್ಥರು ನನಗೆ ಪರಿಚಯ, ಕುಟುಂಬದವರ ಜೊತೆಗೆ ನಾನು ಮಾತನಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಡಿವೈಡರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
ಬಸ್ಸಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ದಿಕ್ಕಿನಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್‌ಗೆ (KSRTC Bus) ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. KA 50 MA 0789 ಸಂಖ್ಯೆಯ ಕಾರ್ ವೇಗವಾಗಿ ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿಯತ್ತ ತೆರಳುತ್ತಿತ್ತು. ಮೃತರನ್ನು ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಅತಿಯಾದ ವೇಗ ಕಾರಣ ಎಂದು ಹೇಳಲಾಗುತ್ತಿದೆ. ಕೆಎಸ್ಆರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಜಮಖಂಡಿಯಲ್ಲಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು