ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Road Accident: ಹೊಸಕೋಟೆಯಲ್ಲಿ ಭೀಕರ ರಸ್ತೆ ಅಪಘಾತ, 7 ಮಂದಿ ಸಾವು

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಅಪಘಾತವಾಗಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಹೊಸಕೋಟೆಯಲ್ಲಿ ಭೀಕರ ರಸ್ತೆ ಅಪಘಾತ, 7 ಮಂದಿ ಸಾವು

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 13, 2026 7:25 AM

ಹೊಸಕೋಟೆ, ಫೆ.13 : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ (Bengaluru rural) ಜಿಲ್ಲೆಯ ಹೊಸಕೋಟೆ (hosakote) ತಾಲೂಕಿನ ಎಂ.ಸತ್ಯವರ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ (death) ಸಾವಿಗೀಡಾಗಿದ್ದಾರೆ.

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಅಪಘಾತವಾಗಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ​ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್​​ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Accident News: ಕರಾಳ ಭಾನುವಾರ: ಅಪಘಾತಗಳಲ್ಲಿ ರಾಜ್ಯದ ನಾನಾ ಕಡೆ 12 ಜನ ಸಾವು