ನೆಲಮಂಗಲ, ಮಾ.28: ರಾತ್ರಿ ಬಿರಿಯಾನಿ ಸವಿಯಲು ಹೋಗುತ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ (Road Accident) ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು (Engineering students) ಸಾವನ್ನಪ್ಪಿರುವ ಘಟನೆ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ (Nelamangala hassan highway) ಸಂಭವಿಸಿದೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಮೂವರೂ ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ (ಮಾ.27) ರಾತ್ರಿ ಬಿರಿಯಾನಿ ತಿನ್ನಲು ಮೂವರು ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾಗಡಿ ತಾಲ್ಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Road Accident: ಬ್ರೇಕ್ ಫೇಲ್, ಬೈಕ್- ಪಿಕಪ್‌ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಎಂಟು ಮಂದಿ ದುರ್ಮರಣ
ನಾಯಿ ಬೊಗಳಿದ್ದಕ್ಕೆ ಕೊಚ್ಚಿ ಕೊಂದ ಪಾಪಿ
ದಾವಣಗೆರೆ: ವಾಕಿಂಗ್ ಮಾಡುವಾಗ ಪಕ್ಕದ ಮನೆಯ ಸಾಕು ನಾಯಿ ಬೊಗಳಿದ್ದಕ್ಕೆ ವ್ಯಕ್ತಿಯೊಬ್ಬ ಕುಡುಗೋಲಿನಿಂದ ನಾಯಿಯನ್ನು (Dog) ಕೊಚ್ಚಿ ಕೊಂದ ಘಟನೆ ಹೊನ್ನಾಳಿ (Honnali) ತಾಲೂಕಿನ ತ್ಯಾಗದಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಂಜುನಾಥ್ ತನ್ನ ಸಾಕು ಸಾಯಿಯ ಜತೆ ಗ್ರಾಮದ ಬೀದಿಯಲ್ಲಿ ವಾಯುವಿಹಾರಕ್ಕೆ ಹೋಗುತ್ತಿದ್ದ. ಈ ವೇಳೆ ರವಿ ಎಂಬವರ ಸಾಕು ನಾಯಿ ಮಂಜುನಾಥ್‌ನ ನಾಯಿಯನ್ನು ನೋಡಿ ಬೋಗಳಿದೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಕೈಯಲ್ಲಿದ್ದ ಕುಡುಗೋಲಿನಿಂದ ರವಿಯವರ ಸಾಕುನಾಯಿಯನ್ನು ಕೊಚ್ಚಿ ಕೊಂದಿದ್ದಾನೆ. ಈ ವೇಳೆ ರವಿಯವರ ಮೇಲೂ ಮಂಜುನಾಥ್ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.