Road Accident: ದಾಬಸ್ ಪೇಟೆ ಬಳಿ ಸರಣಿ ಅಪಘಾತ; ಒಬ್ಬ ಸಾವು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
Road Accident: ದಾಬಸ್ ಪೇಟೆ ಬಳಿ ಸರಣಿ ಅಪಘಾತ; ಒಬ್ಬ ಸಾವು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
Prabhakara R
December 30, 2024
ದಾಬಸ್ ಪೇಟೆ: ಪ್ಯಾಸೆಂಜರ್ ಆಟೋ, ಕಾರು ಮತ್ತು ಲಾರಿ ಮಧ್ಯೆ ಸರಣಿ ಅಪಘಾತ (Road Accident) ಸಂಭವಿಸಿ ಒಬ್ಬರು ಮೃತಪಟ್ಟು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಹೆಬ್ಬಾಗಿಲು ಸಮೀಪದ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 45ರಲ್ಲಿ ನಡೆದಿದೆ.
ಸರಣಿ ಅಪಘಾತದಲ್ಲಿ ವೀರಣ್ಣ(55) ಎಂಬುವವರು ಮೃತಪಟ್ಟಿದ್ದು, ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಸೇರಿ ಹಲವರಿಗೆ ಗಾಯಗಳಾಗಿವೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಗಾಯಗೊಂಡು ರಸ್ತೆ ಪಕ್ಕದಲ್ಲೇ ನರಳಾಡುತ್ತಿದ್ದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಸುದ್ದಿಯನ್ನೂ ಓದಿ | Contractor death case: ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್
ರಿಯಲ್ ಎಸ್ಟೇಟ್ ಉದ್ಯಮಿಯ ವಂಚನೆಯಿಂದ ನೊಂದು ಶಿಕ್ಷಕ ಆತ್ಮಹತ್ಯೆ
ಬೆಂಗಳೂರು: ರಿಯಲ್ ಎಸ್ಟೇಟ್ (Real Estate) ಉದ್ಯಮಿಯಿಂದ ವಂಚನೆಗೊಳಗಾಗಿ ನೊಂದು ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru news) ನಡೆದಿದೆ. ಈ ಕುರಿತು ಅವರು ಡೆತ್‌ನೋಟ್ (Death note) ಬರೆದಿಟ್ಟಿದ್ದು, ತಮಗಾದ ವಂಚನೆಯನ್ನು ತೆರೆದಿಟ್ಟಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿ ಸಮೀಪದ ಹೊಸಹಳ್ಳಿಯ ಸರಕಾರಿ ಪ್ರೌಢಶಾಲಾ ಶಿಕ್ಷಕ ನರಸಿಂಹಮೂರ್ತಿ (59) ಎಂಬವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನರಸಿಂಹಮೂರ್ತಿ, ಹೊಸಕೋಟೆ ತಾಲೂಕಿನ ಜಡಗನಹಳ್ಳಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿದ್ದರು.
ಅವರು ಜ.15ರಂದು ಸೇವೆಯಿಂದ ನಿವೃತ್ತಿ ಹೊಂದಬೇಕಿತ್ತು. ಮಾಗಡಿ ರಸ್ತೆಯ ತುಂಗಾನಗರದಲ್ಲಿ ಅವರಿಗೆ ಸೇರಿದ 25 ಗುಂಟೆ ಜಮೀನಿದ್ದು, ಅದರ ಮಾರಾಟದಲ್ಲಿ ವಂಚನೆಯಾಗಿದೆ. ತುಂಗಾನಗರದ ಜಮೀನನ್ನು 10 ಕೋಟಿ ರೂ.ಗೆ ಖರೀದಿಸುವುದಾಗಿ ಹೇಳಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್ ಎಂಬಾತ ನರಸಿಂಹಮೂರ್ತಿ ಅವರಿಗೆ ಮುಂಗಡವಾಗಿ 10 ಲಕ್ಷ ರೂ. ಕೊಟ್ಟು ಕರಾರು ಮಾಡಿಕೊಂಡಿದ್ದ. ಬಾಕಿ ಹಣವನ್ನು ನಂತರ ಕೊಡುವುದಾಗಿ ನಂಬಿಸಿ, ಕ್ರಯಪತ್ರ ಸಹ ಮಾಡಿಸಿಕೊಂಡು ವಂಚಿಸಿದ್ದ.
ಕೆಲ ದಿನಗಳ ಬಳಿಕ ನರಸಿಂಹಮೂರ್ತಿ ಹಣ ಕೇಳಿದಾಗ ಸತೀಶ್ ಹಣ ಕೊಡದೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ನರಸಿಂಹಮೂರ್ತಿ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಡೆತ್ ನೋಟ್‌ನಲ್ಲಿ ಸತೀಶ್ ಸೇರಿದಂತೆ 9 ಜನರ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Contractor death: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್