ನೆಲಮಂಗಲದ ವಿಪ್ರೋ ಎಂಟರ್‌ಪ್ರೈಸಸ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ
ಮಾದನಾಯಕನಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿ ಅಗ್ನಿ ಅವಘಡ ನಡೆದಿದೆ. ಬೆಂಕಿಗಾಹುತಿಯಾದ ಗೋದಾಮಿನಲ್ಲಿ ಸಾಬೂನು, ಸೋಪು ಪುಡಿ ಸೇರಿ ವಿವಿಧ ರೀತಿಯ ವಸ್ತುಗಳನ್ನಿಟ್ಟಿಡಲಾಗಿತ್ತು. ಪ್ರಾಥಮಿಕ ವರದಿಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
-
Prabhakara R
Feb 22, 2026 2:57 PM
ನೆಲಮಂಗಲ: ನಗರದ ಮಾಕಳಿಯಲ್ಲಿನ ವಿಪ್ರೋ ಎಂಟರ್‌ಪ್ರೈಸಸ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಸೃಷ್ಟಿ ಲೋಕೇಶ್ ಎಂಬುವವರ ಗೋದಾಮು ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಮಾದನಾಯಕನಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿ ಅಗ್ನಿ ಅವಘಡ ನಡೆದಿದೆ. ಬೆಂಕಿಗಾಹುತಿಯಾದ ಗೋದಾಮಿನಲ್ಲಿ ಸಾಬೂನು, ಸೋಪು ಪುಡಿ ಸೇರಿ ವಿವಿಧ ರೀತಿಯ ವಸ್ತುಗಳನ್ನಿಟ್ಟಿಡಲಾಗಿತ್ತು. ಪ್ರಾಥಮಿಕ ವರದಿಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಪಕ್ಕದ ಫ್ರಿಡ್ಜ್ ಗೋದಾಮಿಗೂ ಬೆಂಕಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.