ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shocking News: ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳು, ಪತಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

Bengaluru Crime News: ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬೆಂಗಳೂರು : ಇಬ್ಬರು ಮಕ್ಕಳು, ಪತಿಯನ್ನು ಕೊಂದು (Murder) ಪತ್ನಿ ಆತ್ಮಹತ್ಯೆಗೆ (Self harming) ಯತ್ನಿಸಿರುವ ಘಟನೆ ಬೆಂಗಳೂರು (Bengaluru crime news) ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ (shocking news) ನಡೆದಿದೆ. ಗೊಣಕನಹಳ್ಳಿ ಗ್ರಾಮದಲ್ಲಿ ಶಿವು (32), ಮಕ್ಕಳಾದ ಚಂದ್ರಕಲಾ (11), ಉದಯ್ ಸೂರ್ಯ (7) ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು, ಪತಿಯನ್ನು ಕೊಂದ ಬಳಿಕ ಪತ್ನಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅದೃಷ್ಟವಶಾತ್ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಶಿವು ಅಪಘಾತದಲ್ಲಿ ಗಾಯಗೊಂಡ ಕಾರಣ ಚಿಕಿತ್ಸೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥಗೊಂಡ ಮಂಜುಳಾ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅತ್ತೆಯನ್ನೇ ಕೊಲೆಗೈದ ಅಳಿಯ

ಹಾಸನ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮಗಳನ್ನು ತವರು ಮನೆಗೆ ಕರೆದೊಯ್ದಿದ್ದಕ್ಕೆ ಅತ್ತೆಯನ್ನೇ (mother in law) ಅಳಿಯ (Son in law) ಕೊಲೆ (murder case) ಮಾಡಿರುವ ಘಟನೆ ಹಾಸನ (Hassan news) ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ. ರಾಮನಾಥಪುರದಲ್ಲಿ ರಸೂಲ್ ಎಂಬಾತ ಚಾಕುವಿನಿಂದ ಇರಿದು ಫೈರೋಜಾ ಬಾನು (55) ಎಂಬಾಕೆಯ ಕೊಲೆಗೈದಿದ್ದಾನೆ.

9 ವರ್ಷದ ಹಿಂದೆ ರಸೂಲ್, ಸಮೀರಾ ಬಾನು ಎಂಬಾಕೆಯ ಜೊತೆಗೆ ಮದುವೆಯಾಗಿದ್ದ. ಪದೇ ಪದೆ ಪತ್ನಿ ಸಮೀರಾ ಬಾನುಗೆ ರಸೂಲ್ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಿನ್ನೆ ಮಗಳನ್ನು ತವರು ಮನೆಗೆ ಫೈರೋಜಾ ಬಾನು ಕರೆತಂದಿದ್ದರು. ಇದರಿಂದ ಕೋಪಗೊಂಡ ರಸೂಲ್ ಅತ್ತೆಯನ್ನೇ ಕೊಲೆ ಮಾಡಿದ್ದಾನೆ. ಗಾಯಗೊಂಡ ಪತ್ನಿ ಸಮೀರಾಗೆ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನ-ಬೆಂಗಳೂರಿನ ಅಪೋಲೋ ಆಸ್ಪತ್ರೆಗಳಿಂದ ಜಾಗೃತಿ ಅಭಿಯಾನ

ಹರೀಶ್‌ ಕೇರ

View all posts by this author