ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Devanahalli Accident: ದೇವನಹಳ್ಳಿಯಲ್ಲಿ ಭೀಕರ ಹಿಟ್‌ ಆ್ಯಂಡ್‌ ರನ್‌; ಮೂವರು ಯುವಕರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿದ್ದರಿಂದ ಮೂವರು ಯುವಕರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್‌ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ದೇವನಹಳ್ಳಿಯಲ್ಲಿ ಭೀಕರ ಹಿಟ್‌ ಆ್ಯಂಡ್‌ ರನ್‌; ಮೂವರು ಯುವಕರ ದುರ್ಮರಣ

ಸಾಂದರ್ಭಿಕ ಚಿತ್ರ -

Prabhakara R
Prabhakara R Jan 17, 2026 2:02 PM

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಭೀಕರ ಹಿಟ್‌ ಆ್ಯಂಡ್‌ ರನ್‌ಗೆ ಮೂವರು ಬಲಿಯಾಗಿರುವ ಘಟನೆ (Devanahalli Accident) ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜ್ಯ ಹೆದ್ದಾರಿಯಲ್ಲಿ ಅಪಘಾತದ ನಂತರ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.

ಬೈಕ್ ಸವಾರ ತೌಸಿಫ್ ಸೇರಿ ಮೂವರು ಸವಾರರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬೈಕಿಗೆ ಡಿಕ್ಕಿ ಹೊಡಿಸಿ ಟಿಪ್ಪರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಸವಾರರು ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್‌, ಬೈಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಮೂವರು ಬೈಕ್‌ ಸವಾರರು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ!

ಹಾನಗಲ್: ಪದೇಪದೆ ತವರು ಮನೆಗೆ ಹೋಗುತ್ತಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಪತಿ ಹಲ್ಲೆ ಎಸಗಿ ಕೊಲೆ ಮಾಡಿರುವ ಘಟನೆ ಹಾನಗಲ್‌ ತಾಲೂಕಿನ ಮುಡೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಸಾಲೇಹಾ ಚಮನಸಾಬ ಗಣಜೂರ ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಮುಡೂರು ಗ್ರಾಮದ ಗೌಸ್ ಬಿ ಮಕಬುಲ್ ಅಹ್ಮದ್ ಹಿರೇಹಳ್ಳಿ (44) ಕೊಲೆ ಆರೋಪಿಯಾಗಿದ್ದಾನೆ.

Murder case: ಬಾಲಕನ ಕೊಲೆ, ಹತ್ಯೆಗೈದ ಮೂವರು ಅಪ್ರಾಪ್ತ ವಯಸ್ಕರು ಅರೆಸ್ಟ್

ಈ ಘಟನೆಗೆ ಸಂಬಂಧಿಸಿ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆಗಾಗಿ ಹಾನಗಲ್‌ ಪೊಲೀಸ್ ಠಾಣೆಯ ವಿಶೇಷ ತಂಡ ಕಾರ್ಯಾಚರಣೆ ಮುಂದುವರಿಸಿದೆ.