ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಘಟನೆ ನಡೆದಿದೆ. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಮನೆಯೊಳಗೆ ತಂದೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು ಸಂಪ್‌ಗೆ ಬಿದ್ದು ಮೃತ ಪಟ್ಟಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

‌ಮೃತ ಮಗು ಚಿರಾಗ್. -

Prabhakara R
Prabhakara R Mar 12, 2026 2:03 PM

ನೆಲಮಂಗಲ: ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ (Child Death) ಘಟನೆ ಬೆಂಗಳೂರು ಉತ್ತರ ತಾಲೂಕಿನ (Bengaluru North) ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಅಣ್ಣಯ್ಯ ಹಾಗೂ ಋತು ದಂಪತಿಯ ಮಗ ಚಿರಾಗ್‌ ಮೃತ ಮಗು ಎಂದು ಗುರುತಿಸಲಾಗಿದೆ.

ದಂಪತಿ ಸಂಬಂಧಿಕರ ಮದುವೆಗೆ ತೆರಳಲು ರೆಡಿಯಾಗುತ್ತಿದ್ದರು. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಅಣ್ಣಯ್ಯ ಮನೆಯೊಳಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪ್‌ಗೆ ಬಿದ್ದು ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮನೆಯಿಂದ ಹೊರಬಂದು ನೋಡಿದಾಗ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್‌ ಡಿಕ್ಕಿಯಾಗಿ ವೈದ್ಯಕೀಯ ವಿದ್ಯಾರ್ಥಿನಿ ಸಾವು

ಬೆಂಗಳೂರು: ​​ಸ್ಕೂಟರ್‌ಗೆ ಟಿಪ್ಪರ್​ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ನೆನ್ನೆ ಸಂಜೆ ಕಾಲೇಜು ಮುಗಿಸಿ ತೆರಳುವಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಕೃತಿಕಾ (21) ಆರ್‌ಆರ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಸ್ನೇಹಿತೆ ಹಂಸ (21) ಸಹ ಇದೇ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ. ನಿನ್ನೆ ಸಂಜೆ ಕಾಲೇಜು ಮುಗಿಸಿ ಇಬ್ಬರೂ ಆಕ್ಟಿವಾ ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿದ್ದರು. ಕಾಲೇಜಿನ ಗೇಟ್‌ ಹೊರಗಡೆಯೇ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಅತಿವೇಗದಿಂದ ಬಂದು ಡಿಕ್ಕಿ ಹೊಡೆದಿದೆ. ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಂಸಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಮತ್ತು ಇತರರು ತಕ್ಷಣವೇ ಹಂಸನನ್ನು ಆರ್‌ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆಕೆಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು; ನಾಲ್ವರಿಗೆ ಗಾಯ

ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯುವ ಪ್ರಯತ್ನ ನಡೆಯುತ್ತಿದೆ.