Doddaballapur News: ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು
ದೊಡ್ಡಬಳ್ಳಾಪುರದಲ್ಲಿ ದುರ್ಘಟನೆ ನಡೆದಿದೆ. ಶನಿವಾರ ಸಂಜೆ ಮಕ್ಕಳು ಕೃಷಿ ಹೊಂಡದ ಪಕ್ಕದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಕೃಷಿ ಹೊಂಡಕ್ಕೆ ಆಯತಪ್ಪಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ಸೂಕ್ತ ರೀತಿಯಲ್ಲಿ ಬೇಲಿ ನಿರ್ಮಿಸದ ಕಾರಣ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
-
ದೊಡ್ಡಬಳ್ಳಾಪುರ: ಆಟವಾಡುತ್ತಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ಸಂಭವಿಸಿದೆ. ಸವಿತಾ ಮತ್ತು ಮುನಿರಾಜು ಅವರ ಪುತ್ರಿ ದಕ್ಷಾ (11), ಆಶಾ ಮತ್ತು ಪ್ರದೀಪ್ ಅವರ ಮಗ ಧನುಷ್ (4) ಮೃತರು ತಿಳಿದುಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಶನಿವಾರ ಸಂಜೆ ಮಕ್ಕಳು ಕೃಷಿ ಹೊಂಡದ ಪಕ್ಕದಲ್ಲಿ ಆಟವಾಡುತ್ತಿದ್ದರು, ಈ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಮುಳುಗಿ ಸಾವನ್ನಪ್ಪಿದ್ದಾರೆ. ಕೃಷಿ ಹೊಂಡ ಗುರುಮೂರ್ತಿ ಎಂಬುವವರಿಗೆ ಸೇರಿದ್ದು, ಕೃಷಿ ಹೊಂಡಕ್ಕೆ ಸೂಕ್ತ ರೀತಿಯಲ್ಲಿ ಬೇಲಿ ನಿರ್ಮಿಸದ ಕಾರಣ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಡ್ಯದಲ್ಲಿ ನೀರಿನ ಸಂಪ್‌ಗೆ ಬಿದ್ದು 2 ವರ್ಷದ ಮಗು ಸಾವು
ಮಂಡ್ಯ: ಮನೆ ಮುಂದಿನ ನೀರಿನ ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ವಿನು (2) ಮೃತ ಬಾಲಕ.
ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಶಾಲಾ ಬಸ್ ಹರಿದು ಮಗಳ ಕಣ್ಣೆದುರೇ ತಾಯಿ ಸಾವು!
ಬೆಂಗಳೂರು: ರಾಜಧಾನಿಯಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ಮಗಳನ್ನು ಕಾಲೇಜಿಗೆ ಬಿಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ಅಪಘಾತದಲ್ಲಿ (Bengaluru Accident) ಮೃತಪಟ್ಟ ಘಟನೆ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾಂತಾ ಮೃತ ಮಹಿಳೆ. ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ಕಾಂತಾ ಹಾಗೂ ಪುತ್ರಿ ನೇಹಾ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮಳೆಯಿಂದ ರಸ್ತೆ ಗುಂಡಿಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಕಾಂತಾ ಅವರ ಮೇಲೆ ಹಿಂದಿನಿಂದ ಬಂದ ಶಾಲಾ ಬಸ್ ಹರಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ವೇಳೆ ಮಗಳು ನೇಹಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ವೈಟ್‌ಫೀಲ್ಡ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.