Nelamangala News: ನೆಲಮಂಗಲದಲ್ಲಿ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು
Worker dies: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಗೆಜ್ಜೆಗದಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (38) ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-

ಬೆಂಗಳೂರು: 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಗೆಜ್ಜೆಗದಹಳ್ಳಿಯಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾನೆ.
ಮೃತ ಕಾರ್ಮಿಕನನ್ನು ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (38) ಎಂದು ತಿಳಿದುಬಂದಿದೆ. ಕಳೆದ ಎಂಟು ವರ್ಷಗಳಿಂದ ಬೀರಪ್ಪ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಇದೀಗ ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಬೀರಪ್ಪ ಸಾವನಪ್ಪಿದ್ದಾನೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾವಗಡದಲ್ಲಿ ಘೋರ ಘಟನೆ; ಇಬ್ಬರು ಮಕ್ಕಳ ಕತ್ತು ಕೊಯ್ದು ಕೊಂದು ತಾಯಿ ಆತ್ಮಹತ್ಯೆ!
ಪಾವಗಡ: ಇಬ್ಬರು ಮಕ್ಕಳ ಕತ್ತು ಕೊಯ್ದು ಕೊಂದ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ (Pavagada News) ಕಡಪಲ ಕೆರೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಒಂದೂವರೇ ವರ್ಷ ಹಾಗೂ ನಾಲ್ಕು ವರ್ಷದ ಮಗುವಿನ ಕತ್ತು ಕೊಯ್ದು ಸಾಯಿಸಿದ ನಂತರ ತಾಯಿ ಸರಿತಾ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಸುದ್ದಿಯನ್ನೂ ಓದಿ | Murder Case: ಸಹೋದರನ ಆತ್ಮಹತ್ಯೆ; ತಂದೆ ಮೇಲಿನ ಸೇಡಿಗಾಗಿ ಮಗಳನ್ನು ಕೊಂದ ಪಾಪಿ!
ಗಂಡ ಸಂತೋಷ್, ಲಗೇಜ್ ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ. ಅತ್ತೆ ಖಾಸಗಿ ಕೆಲಸ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.