ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಸಾವು; ರೊಚ್ಚಿಗೆದ್ದು ಲಾರಿಗೆ ಬೆಂಕಿ ಹಚ್ಚಿದ ಜನ

Road Accident: ಬೆಂಗಳೂರಿನ ಥಣಿಸಂದ್ರದ ಬಳಿ ಅಪಘಾತ ನಡೆದಿದೆ. ಅಪ್ಪನ ಜತೆ ಬೈಕ್‌ನಲ್ಲಿ ಬಾಲಕ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಬಾಲಕ ಮೃತಪಟ್ಟಿದ್ದಾನೆ. ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು, ಕಸ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಸಾವು

Profile Prabhakara R Mar 29, 2025 4:22 PM

ಬೆಂಗಳೂರು: ಬಿಬಿಎಂಪಿ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ಹತ್ತು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Road Accident) ಬೆಂಗಳೂರಿನ ಥಣಿಸಂದ್ರದ ಬಳಿ ನಡೆದಿದೆ. ಐಮಾನ್ (10) ಮೃತ ಬಾಲಕ. ತಂದೆಯ ಜತೆ ಬಾಲಕ ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ನಗರದ ಥಣಿಸಂದ್ರ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ. ಅಪ್ಪನ ಜತೆ ಬೈಕ್‌ನಲ್ಲಿ ಐಮಾನ್ ತೆರಳುತ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಇದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು, ಕಸ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | MLC Rajendra Rajanna: ಕೊಲೆ ಯತ್ನ; ಪೆನ್‌ಡ್ರೈವ್‌ ಸಮೇತ ದೂರು ನೀಡಿದ ರಾಜೇಂದ್ರ, ತನಿಖೆಗೆ ತಂಡ ರಚನೆ

ಬಸ್‌-ಬೈಕ್‌ ಡಿಕ್ಕಿಯಾಗಿ ದಂಪತಿ ದುರ್ಮರಣ, ಹಲವರಿಗೆ ಗಾಯ

ಬಾಗಲಕೋಟೆ: ಸಾರಿಗೆ ಬಸ್‌ ಮತ್ತು ಬೈಕ್‌ ಡಿಕ್ಕಿಯಾಗಿ ದಂಪತಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ (Road Accident) ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್‌ ಡಿಕ್ಕಿಯಾಗಿದ್ದರಿಂದ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದರಿಂದ ಬಸ್‌ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಮುಗಳಖೋಡ ಗ್ರಾಮದ ಶಂಕರ ಲಕ್ಷ್ಮೇಶ್ವರ (50), ಶ್ರೀದೇವಿ ಲಕ್ಷ್ಮೇಶ್ವರ (40) ಮೃತ ದಂಪತಿ.

ಮಹಾಲಿಂಗಪುರ-ಮುಧೋಳ್ ಮಾರ್ಗದ ಮಳಲಿ ಬಳಿ ಅಪಘಾತದ ನಡೆದಿದೆ. ಮುಗಳಖೋಡದಿಂದ ಮಳಲಿ ಕಡೆಗೆ ಬೈಕ್‌ನಲ್ಲಿ ದಂಪತಿ ಹೊರಟಿದ್ದರು. ಇದೇ ವೇಳೆ ಕೊಲ್ಹಾಪುರದಿಂದ ಯಾದಗಿರಿ ಕಡೆಗೆ ಬಸ್ ಹೊಗುತ್ತಿತ್ತು. ಈ ವೇಳೆ ಬಸ್‌ ಮತ್ತು ಬೈಕ್‌ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಇನ್ನು ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ವಾಗತ ಕಮಾನು ನೆಲಕ್ಕುರುಳಿದ್ದು, ಬಸ್‌ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ಸುದ್ದಿಯನ್ನೂ ಓದಿ | MLC Rajendra Rajanna: ಕೊಲೆ ಯತ್ನ; ಪೆನ್‌ಡ್ರೈವ್‌ ಸಮೇತ ದೂರು ನೀಡಿದ ರಾಜೇಂದ್ರ, ತನಿಖೆಗೆ ತಂಡ ರಚನೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಸ್ಥಳಕ್ಕೆ ಮುಧೋಳ್ ಪೊಲೀಸರು‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಎರಡು ಅಪಘಾತ, ಯುಗಾದಿ ಹಬ್ಬಕ್ಕೆ ತೆರಳುತ್ತಿದ್ದ ಯುವಕರು ಸೇರಿ ನಾಲ್ವರ ದುರ್ಮರಣ

ದಾವಣಗೆರೆ/ಉಡುಪಿ: ಎರಡು ಪ್ರತ್ಯೇಕ ಅಪಘಾತಗಳು ನಡೆದಿದ್ದು, ಯುಗಾದಿ ಹಬ್ಬಕ್ಕೆಂದು ಊರಿಗೆ ತೆರಳುತ್ತಿದ್ದ ಇಬ್ಬರು ಯುವಕರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಹಾಗೂ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೀರೂರು ಹಾಗೂ ಸಮ್ಮಸಗಿ ರಾಜ್ಯ ಹೆದ್ದಾರಿಯ ಗುಳ್ಳೇಹಳ್ಳಿಯ ಕೂಗಳತೆಯಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (31) ಮೃತ ಯುವಕರು ಎಂದು ತಿಳಿದುಬಂದಿದೆ. ಯುಗಾದಿ ಹಬ್ಬ ಇರುವ ಕಾರಣ ತಮ್ಮ ದ್ವಿಚಕ್ರ ವಾಹನದಲ್ಲಿ ಯುವಕರು ಊರಿಗೆ ಮರಳುವ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಹೋಗಿದೆ.

ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪರಿಚಿತ ವಾಹನದ ಗುರುತನ್ನು ಪತ್ತೆ ಮಾಡಲು ಸ್ಥಳೀಯ ಸಿಸಿ ಟಿವಿ ಕ್ಯಾಮೆರಾಗಳನ್ನು ಜಾಲಾಡಲಾಗಿದೆ.
ಇದನ್ನೂ ಓದಿ: Road Accident: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಬಳಿ ಅಪಘಾತ, ಮೂವರು ಸಾವು, ಮೂವರು ಗಂಭೀರ

ಉಡುಪಿಯಲ್ಲಿ ಕಾರು ಹಾಗೂ ಬಸ್ರೂರು ಸಮೀಪದ ಬಿ.ಹೆಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎನ್ನುವವರು ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತಂತೆ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.