ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Traffic fines: ಟ್ರಾಫಿಕ್‌ ಫೈನ್‌ ಶೇ.50 ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್; ಬರೋಬ್ಬರಿ 106 ಕೋಟಿ ದಂಡ ಸಂಗ್ರಹ!

Bengaluru Traffic Police: ಕನಾಟಕ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇ.50% ರಷ್ಟು ರಿಯಾಯಿತಿಯನ್ನು ನೀಡಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಪೊಲೀಸ್‌ ಇಲಾಖೆ ನೀಡಿದ್ದ ಶೇ.50 ರಿಯಾಯಿತಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಂಡ ಪಾವತಿಸಲು (Traffic fines) ನಿಗದಿಪಡಿಸಲಾಗಿದ್ದ ರಿಯಾಯಿತಿ ಅವಧಿ ಆ.23 ರಿಂದ ಸೆ.12ವರೆಗೆ ಎಲ್ಲಾ ವಿಧಾನಗಳ ಮೂಲಕ ಒಟ್ಟು 37,86,173 ಪ್ರಕರಣಗಳು ಇತ್ಯರ್ಥಗೊಂಡು, ಒಟ್ಟು 106,00,19,550 ರೂ. ದಂಡ ಸಂಗ್ರಹವಾಗಿದೆ.

ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ಮಾಹಿತಿ ನೀಡಿದೆ. ಕನಾಟಕ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇ.50% ರಷ್ಟು ರಿಯಾಯಿತಿಯನ್ನು ನೀಡಿತ್ತು. ಈ ಆದೇಶವು ದಿನಾಂಕ ಆ.23ರಂದು ಜಾರಿಗೆ ಬಂದಿತ್ತು. ಇದೀಗ ಸೆ.12ರ ವೇಳೆಗೆ ಒಟ್ಟು 37,86,173 ಪ್ರಕರಣಗಳಲ್ಲಿ ಒಟ್ಟು 106,00,19,550 ರೂ. ದಂಡ ಪಾವತಿಯಾಗಿದೆ ಎಂದು ತಿಳಿಸಿದೆ.



ಇನ್ನು ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಟ್ರಾಫಿಕ್ ನಿಯಮ ಪಾಲಿಸದೆ ವಾಹನ ಚಲಾಯಿಸುವ ವಾಹನ ಮಾಲೀಕರಿಗೆ ದುಬಾರಿ ದಂಡ ಹಾಕಲಾಗುತ್ತಿದೆ. ಎಲ್ಲೆಡೆ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಣ್ಣ ಟ್ರಾಫಿಕ್ ನಿಯಮ ಉಲ್ಲಂಘನೆಯನ್ನು ಪತ್ತೆ ಹಚ್ಚಿ, ಚಲನ್ ಜಾರಿಗೊಳಿಸಲಾಗುತ್ತಿದೆ. ಪ್ರತಿ ದಿನ ಬೆಂಗಳೂರಲ್ಲಿ ಸರಾಸರಿ 30 ಸಾವಿರ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿವೆ.

ಈ ಸುದ್ದಿಯನ್ನೂ ಓದಿ | Bengaluru Crime: ಡ್ರಗ್‌ ಪೆಡ್ಲರ್‌ಗಳ ಜೊತೆ ಪಾರ್ಟಿ ಮಾಡಿದ 11 ಪೊಲೀಸ್‌ ಅಧಿಕಾರಿಗಳ ಅಮಾನತು

ಸಿಗ್ನಲ್ ಜಂಪ್‌, ಓವರ್‌ ಸ್ಪೀಡ್‌ ಸೇರಿ ವಿವಿಧ ರೀತಿಯ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಲು ಎಐ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಯಾರೇ ಟ್ರಾಫಿಕ್ ನಿಯಮ ಉಲ್ಲಂಘಿಸಿದರೂ ಎಐ ಕ್ಯಾಮೆರಾಗಳು ಸೆರೆ ಹಿಡಿದು ವಿವರ ಸಮೇತ ಕಳುಹಿಸಲಿವೆ.