ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ಕೆಜಿ ಗಾಂಜಾ ಜಪ್ತಿ
Kempegowda international Airport Bengaluru: ವಿದೇಶದಿಂದ ಕಳ್ಳಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ವಿದೇಶದಿಂದ ಕಳ್ಳಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರು (Bengaluru) ಗ್ರಾಮಾಂತರದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international Airport) ನಡೆದಿದೆ. 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಆರೋಪಿಯಿಂದ ವಶಪಡಿಸಿಕೊಳ್ಳಲಾಗಿರುವ ಹೈಡ್ರೋಪೋನಿಕ್ ಗಾಂಜಾದ ಮೌಲ್ಯ ಸುಮಾರು 4 ಕೋಟಿ 22 ಲಕ್ಷ ರೂಪಾಯಿಗಳು ಎನ್ನಲಾಗಿದೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕ ಲಗೇಜ್ ಬ್ಯಾಗ್ನಲ್ಲ ಮಾದಕ ವಸ್ತುವನ್ನು ಅಡಗಿಸಿಟ್ಟುಕೊಂಡು ಬರುವ ಮೂಲಕ ಸಾಗಾಟ ಯತ್ನ ನಡೆಸಿದ್ದ. ಆದರೆ ಏರ್ಪೋರ್ಟ್ಬಲ್ಲಿ ಪ್ರಯಾಣಿಕರ ತಪಾಸಣೆ ವೇಳೆ ಗಾಂಜಾವನ್ನು ಅದಿಕಾರಿಗಳು ಪತ್ತೆಹಚ್ಚಿದ್ದಾರೆ.
Major NDPS Seizure 10.07.2026
— Bengaluru Customs (@blrcustoms) July 10, 2026
Bengaluru Customs intercepted a passenger arriving from Bangkok and seized 12.07 kg of hydroponic ganja, valued at ₹4.22 crore, concealed in baggage at KIA T2.
The accused was arrested under the NDPS Act, 1985. #CBIC #Customs
ಕಳೆದ ತಿಂಗಳು ಬ್ಯಾಂಕಾಕ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಕ್ಕೆ ಆಗಮಿಸಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸೌ ಅಧಿಕಾರಿಗಳು ಅವರುಗಳಿಂದ ಒಟ್ಟು 5.90 ಕೋಟಿ ಮೌಲ್ಯದ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು. ಕಸ್ಟಮ್ಸೌ ಅಧಿಕಾರಿಗಳು ಅನುಮಾನದ ಮೇಲೆ ಇಬ್ಬರು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದ ವೇಳೆ ಮಾದಕ ವಸ್ತು ಪತ್ತೆಯಾಗಿತ್ತು. ಸಾಮಾಜಿಕ ಜಾಲತಾಣ ನೀಡಿದ ಮಾಹಿತಿಯ ಪ್ರಕಾರ, ಪ್ರಯಾಣಿಕನ ಚೆಕ್-ಇನ್ ಲಗೇಜ್‌ನಲ್ಲಿ ಅಡಗಿಸಿಟ್ಟಿದ್ದ 10.20 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ 3.57 ಕೋಟಿ ಎಂದು ತಿಳಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 13.14 ಕೋಟಿ ರೂ ಮೌಲ್ಯದ ಗಾಂಜಾ ವಶ; ಆರು ಜನರ ಬಂಧನ
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ಜೂನ್ 4ರಂದು ಬ್ಯಾಂಕಾಕ್‌ನಿಂದ ಬಂದಿದ್ದ ಮತ್ತೊಬ್ಬ ಪ್ರಯಾಣಿಕನಿಂದ 6.66 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ನಡೆದ ತಪಾಸಣೆಯ ವೇಳೆ ಪ್ರಯಾಣಿಕನ ಲಗೇಜ್‌ನಲ್ಲಿ ಅಡಗಿಸಿಡಲಾಗಿದ್ದ 2.33 ಕೋಟಿ ಮೌಲ್ಯದ ಗಾಂಜಾ ಪತ್ತೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.