ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ 13,675 ಅಕ್ರಮ ವಲಸಿಗರು

ರಾಜ್ಯದಲ್ಲಿ ಕಾನೂನುಬಾಹಿರವಾಗಿ ನೆಲೆಸಿರುವ ವಿದೇಶಿ ಅಕ್ರಮ ವಲಸಿಗರ ಪಟ್ಟಿಯನ್ನು ಗೃಹ ಇಲಾಖೆ ಅಧಿಕೃತವಾಗಿ ಸಿದ್ಧಪಡಿಸಿದೆ. ಗೃಹ ಇಲಾಖೆಯ ಪ್ರಕಾರ, ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 13675 ಅಕ್ರಮ ವಲಸಿಗರು ಇರುವುದು ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನ ಅತಿ ಹೆಚ್ಚು ಅಂದರೆ ಬರೋಬ್ಬರಿ 10650 ಮಂದಿ ಅಕ್ರಮವಾಗಿ ನೆಲೆಸಿದ್ದು ಅಂಕಿ-ಅಂಶಗಳಿಂದ ತಿಳಿದುಬಂದಿದೆ

ರಾಜ್ಯದಲ್ಲಿ 13,675 ಅಕ್ರಮ ವಲಸಿಗರು

-

Profile
Ashok Nayak Jun 29, 2026 8:29 AM

ಅಕ್ರಮ ವಲಸಿಗರ ಪಟ್ಟಿಯನ್ನು ಸಿದ್ದಪಡಿಸಿದ ಗೃಹ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕಾನೂನುಬಾಹಿರವಾಗಿ ನೆಲೆಸಿರುವ ವಿದೇಶಿ ಅಕ್ರಮ ವಲಸಿಗರ ಪಟ್ಟಿಯನ್ನು ಗೃಹ ಇಲಾಖೆ ಅಧಿಕೃತವಾಗಿ ಸಿದ್ಧಪಡಿಸಿದೆ. ಗೃಹ ಇಲಾಖೆಯ ಪ್ರಕಾರ, ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 13675 ಅಕ್ರಮ ವಲಸಿಗರು ಇರುವುದು ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನ ಅತಿ ಹೆಚ್ಚು ಅಂದರೆ ಬರೋಬ್ಬರಿ 10650 ಮಂದಿ ಅಕ್ರಮವಾಗಿ ನೆಲೆಸಿದ್ದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ನಂತರದ ಸ್ಥಾನಗಳಲ್ಲಿ ಮೈಸೂರು, ಉತ್ತರ ಕನ್ನಡ, ಉಡುಪಿ ಹಾಗೂ ಬೆಳಗಾವಿ ಜಿಲ್ಲೆಗಳಿದ್ದು, ಇಲಾಖೆಯು ಇವರನ್ನು ಪತ್ತೆ ಹಚ್ಚಿ ಮುಂದಿನ ಕಾನೂನು ಕ್ರಮಕ್ಕೆ ಸಜ್ಜಾಗಿದೆ. ಬೆಂಗಳೂರು ನಗರದಲ್ಲಿ 10650, ಮೈಸೂರು 810, ಬೆಳಗಾವಿ 458, ದಕ್ಷಿಣ ಕನ್ನಡ 268, ರಾಮನಗರ 191, ಬಳ್ಳಾರಿ 53, ಚಿಕ್ಕಬಳ್ಳಾಪುರ 38, ಮಂಡ್ಯ 37, ಹುಬ್ಬಳ್ಳಿ-ಧಾರವಾಡ 35, ದಾವಣಗೆರೆ 20, ರಾಯಚೂರು 19, ಕೋಲಾರ 13, ಕೊಡಗು 10, ಕೊಪ್ಪಳ 10, ಕಲಬುರಗಿ 9, ಚಿತ್ರದುರ್ಗ 8, ಹಾಸನ 5, ಚಾಮರಾಜನಗರ 3 ಮಂದಿ ಸೇರಿ 13, 675 ಮಂದಿ ಅಕ್ರಮ ವಲಸಿಗರು ಇದ್ದಾರೆ.

ಇದನ್ನೂ ಓದಿ: Bangalore News: ಮಾನ್ಯತೆ ಇಲ್ಲದೆ ವಿದ್ಯಾರ್ಥಿಗಳ ದಾಖಲಾತಿ ಪ್ರಾರಂಭಿಸಿದ ಶಾಲೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಎಚ್ಚರಿಕೆ

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್: ಇದೇ ವೇಳೆ, ಸಾಂಸ್ಕೃತಿಕ ನಗರಿ ಮೈಸೂರಿಗೆ ಪಶ್ಚಿಮ ಬಂಗಾಳದ ಮೂಲಕ ಬಾಂಗ್ಲಾದೇಶದ ಅಕ್ರಮ ವಲಸಿಗರು ಭಾರಿ ಸಂಖ್ಯೆಯಲ್ಲಿ ಆಗಮಿಸು ತ್ತಿದ್ದಾರೆ ಎಂಬ ವದಂತಿ ದಟ್ಟವಾಗಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಪಶ್ಚಿಮ ಬಂಗಾಳ ದಿಂದ ರೈಲಿನಲ್ಲಿ ಬಂದಿಳಿದ ಕಾರ್ಮಿಕರನ್ನು ಅಕ್ರಮ ಬಾಂಗ್ಲಾ ವಲಸಿಗರು ಎಂದು ಸಂಶಯಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ವೇಳೆ ಸ್ಥಳದಲ್ಲಿ ಭಾರಿ ಹೈಡ್ರಾಮಾ ನಡೆದಿತ್ತು. ಆದರೆ ಪೊಲೀಸರು ಮಧ್ಯಪ್ರವೇಶಿಸಿ ಅವರ ಆಧಾರ್ ಕಾರ್ಡ್ ಸೇರಿದಂತೆ ಎಲ್ಲ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದಾಗ, ಅವರು ಪಶ್ಚಿಮ ಬಂಗಾಳದ ಸದ್ಭಾವನಾ ಕಾರ್ಮಿಕರೇ ಹೊರತು ಯಾವುದೇ ಬಾಂಗ್ಲಾ ವಲಸಿಗರಲ್ಲ ಎಂಬುದು ಸಾಬೀತಾಗಿತ್ತು. ಆದ್ದರಿಂದ, ಸಾರ್ವಜನಿಕರಲ್ಲಿ ಗೊಂದಲ ಹಾಗೂ ಸುಳ್ಳು ವದಂತಿ ಹರಡುವು ದನ್ನು ತಪ್ಪಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸ್ವತಃ ರೈಲ್ವೆ ಪೊಲೀಸರೇ ರಂಗಕ್ಕಿಳಿ ದಿದ್ದಾರೆ. ಪಶ್ಚಿಮ ಬಂಗಾಳದಿಂದ ಮೈಸೂರಿಗೆ ಆಗಮಿಸಿದ ಹೌರಾ ಎಕ್ಸ್‌ಪ್ರಸ್ ರೈಲಿನಲ್ಲಿ ಸತತ ತಪಾಸಣೆ ನಡೆಸಲಾಗುತ್ತಿದ್ದು, ಪ್ರತಿ ಪ್ರಯಾಣಿಕರ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸ ಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.