ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನೇಪಾಳದ ಪ್ರವಾಹದಿಂದ ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆದ 17 ಮಂದಿ ಕನ್ನಡಿಗರು; ಅಪಾಯದಿಂದ ಪಾರಾಗಿದ್ದೇಗೆ?

Nepal Floods: ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದು, 4 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದ ಸ್ವಲ್ಪದರಲ್ಲೇ ಪಾರಾಗಿದ್ದ 17 ಮಂದಿ ಕರ್ನಾಟಕದ ನಿವಾಸಿಗಳು ಮಂಗಳವಾರ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿದ್ದಾರೆ.

ನೇಪಾಳದಿಂದ ಬೆಂಗಳೂರಿಗೆ ಬಂದ ಕನ್ನಡಿಗರು

ಬೆಂಗಳೂರು: ನೇಪಾಳ–ಟಿಬೆಟ್ ಗಡಿ (Nepal Floods) ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದು, 4 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದ ಸ್ವಲ್ಪದರಲ್ಲೇ ಪಾರಾಗಿದ್ದ 17 ಮಂದಿ ಕರ್ನಾಟಕದ ನಿವಾಸಿಗಳು ಮಂಗಳವಾರ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿದ್ದಾರೆ. ನೇಪಾಳ ಏರ್‌ಲೈನ್ಸ್‌ನ RA 225 ವಿಮಾನದ ಮೂಲಕ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ (Bengaluru Airport) ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಇನ್ನೂ 23 ಜನರು ಬರುವುದು ಬಾಕಿ ಇದ್ದು, ಇಂದು ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನೇಪಾಳದ ಪ್ರವಾಹದ ಅನುಭವದ ಕುರಿತು ಮಾಹಿತಿ ಹಂಚಿಕೊಂಡ ಅವರು, ಮೂನ್‌ ಹಿಮಾಲಯ ಅಡ್ವೆಂಚರ್‌ ಎಂಬ ಸಂಸ್ಥೆಯ ಮೂಲಕ ಚಾರಣಕ್ಕೆಂದು ತೆರಳಿದ್ದೆವು. ನಾವು ಪ್ರವಾಹ ದುರಂತದಿಂದ ಕೇವಲ ಒಂದು ದಿನದ ಅಂತರದಲ್ಲಿ ಪಾರಾಗಿದ್ದೇವೆ. ನಾವು ಹೋಟೆಲ್‌ನಿಂದ ಹೊರಟ ಮರುದಿನ ಇಡೀ ಹೋಟೆಲ್ ಕಟ್ಟಡವೇ ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದೆ ಎಂಬುದು ತಿಳಿಯಿತು ಎಂದು ಹೇಳಿದ್ದಾರೆ.

ನೇಪಾಳದಲ್ಲಿ ಸಿಲುಕಿದ್ದ ಕನ್ನಡಿಗರಿಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ದೂರವಾಣಿ ಕರೆ ಮಾಡಿದ್ದರು. ಆದರೆ, ತಾವು ಪ್ರವಾಹ ಪೀಡಿತ ಪ್ರದೇಶಗಳಿಂದ ದೂರದಲ್ಲಿದ್ದ ಕಾರಣ ರಾಜ್ಯ ಸರ್ಕಾರದ ಯಾವುದೇ ನೆರವಿನ ಅಗತ್ಯ ಎದುರಾಗಲಿಲ್ಲ ಎಂದು ಹೇಳಿದರು. ಅಷ್ಟೇ ಅಲ್ಲ, ಇವರಲ್ಲಿ ಕೆಲವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡ ವಿಡಿಯೊ ಕರೆ ಮಾಡಿ ಮಾತಾಡಿದ್ದರು. ಇದೀಗ ಕನ್ನಡಿಗರು ಸುರಕ್ಷಿತವಾಗಿ ಮರಳಿ ಬಂದಿರುವುದಕ್ಕೆ ಸಮಾಧನ ಮೂಡಿಸಿದೆ.

ʼʼಇದು ನಮಗೆ ಸಿಕ್ಕ ಮರುಜನ್ಮʼʼ: ಭಯಾನಕ ಅನುಭವ ಬಿಚ್ಚಿಟ್ಟ ನೇಪಾಳ ಪ್ರವಾಹದಲ್ಲಿ ಬದುಕುಳಿದ ಮಹಿಳೆ

ನೇಪಾಳದಲ್ಲಿ ಪ್ರವಾಹದಿಂದಾಗಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಈ ವರೆಗೂ 1,127 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿಯನ್ನು ರಕ್ಷಿಸಲಾಗಿದ್ದರೂ ಇನ್ನೂ 4,858 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಇದುವರೆಗೆ 11 ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೇಪಾಳ ಸೇನೆ ಸೇರಿದಂತೆ 22 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

Vishakha Bhat Heggar

View all posts by this author